ಎನ್'ಡಿಎ ಸೇರ್ಪಡೆಗೊಳ್ಳುವಂತೆ ಮಹಾರಾಷ್ಟ್ರ ಸಿಎಂ ಫಡ್ನವೀಸ್ ಆಹ್ವಾನ ನೀಡಿದ್ದಾರೆ: ನಾರಾಯಣ ರಾಣೆ
ಬಿಜೆಪಿ ನೇತೃತ್ವದ ಎನ್'ಡಿಎ ಪಕ್ಷದೊಂದಿಗೆ ಸೇರ್ಪಡೆಗೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ನನಗೆ ಆಹ್ವಾನ ನೀಡಿದ್ದರು ಎಂದು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದ ಮಹಾರಾಷ್ಟ್ರ ಹಿರಿಯ...

Published On :
ಮುಂಬೈ: ಬಿಜೆಪಿ ನೇತೃತ್ವದ ಎನ್'ಡಿಎ ಪಕ್ಷದೊಂದಿಗೆ ಸೇರ್ಪಡೆಗೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ನನಗೆ ಆಹ್ವಾನ ನೀಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದ ಮಹಾರಾಷ್ಟ್ರ ಹಿರಿಯ ರಾಜಕೀಯ ನಾಯಕ ನಾರಾಯಣ ರಾಣೆಯವರು ಮಂಗಳವಾರ ಹೇಳಿದ್ದಾರೆ.
ನಿನ್ನೆಯಷ್ಟೇ ನಾರಾಯಣ ರಾಣೆಯವರು ಮಹಾರಾಷ್ಟ್ರ ಮುಖ್ಯಮಂತ್ರಿಗಳ ನಿವಾಸದಲ್ಲಿ ಫಡ್ನವೀಸ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಬಳಿಕ ಮಾತನಾಡಿರುವ ಅವರು ಮುಖ್ಯಮಂತ್ರಿಗಳ ಜೊತೆಗಿನ ಮಾತುಕತೆ ವೇಳೆ ಫಡ್ನವೀಸ್ ಅವರು ಎನ್ ಡಿಎ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಆಹ್ವಾನ ನೀಡಿದರು. ಈ ಬಗ್ಗೆ ನಿರ್ಧಾರ ಕೈಗೊಳ್ಳಲು ನನಗೆ 2 ದಿನಗಳ ಕಾಲಾವಕಾಶ ಬೇಕೆಂದು ಹೇಳಿದೆ ಎಂದು ಹೇಳಿದ್ದಾರೆ
ಶಿವಸೇನೆ ತೊರೆದ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ವೇಳೆ ಮಹಾರಾಷ್ಟ್ರ ಮುಖ್ಯಮಂತ್ರಿ ಮಾಡುವುದಾಗಿ ಕಾಂಗ್ರೆಸ್ ಹೇಳಿತ್ತು. ಆದರೆ, ನೀಡಿದ್ದ ಭರವಸೆಯನ್ನು ಕಾಂಗ್ರೆಸ್ ಈಡೇರಿಸಿಲ್ಲ ಎಂದು ಈ ಹಿಂದೆ ನಾರಾಯಣ ರಾಣೆಯವರು ಆರೋಪಿಸಿದ್ದರು. ಬಳಿಕ ಕಾಂಗ್ರೆಸ್ ಪಕ್ಷದ ಮೇಲೆ ತೀವ್ರ ಅಸಮಾಧಾನಗೊಂಡು 2 ವಾರಗಳ ಹಿಂದಷ್ಟೇ ಪಕ್ಷ ತೊರೆಯಿದ್ದರು.
1999ರಲ್ಲಿ 7 ತಿಂಗಳ ಕಾಲ ಶಿವಸೇನೆಯಿಂದ ಮುಖ್ಯಮಂತ್ರಿಯಾಗಿದ್ದ ನಾರಾಯಣ ರಾಣೆಯವರು 2005ರಲ್ಲಿ ಶಿವಸೇನೆ ನಾಯಕ ಉದ್ಧವ್ ಠಾಕ್ರೆಯವರನ್ನು ಬಹಿರಂಗವಾಗಿ ಟೀಕಿಸಿದ್ದರು. ಮರುದಿನ ಅವರನ್ನು ಪಕ್ಷದಿಂದ ಕೈಬಿಡಲಾಗಿತ್ತು. ನಂತರ ರಾಣೆಯವರು ಕಾಂಗ್ರೆಸ್'ಗೆ ಸೇರ್ಪಡೆಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


