ಪಾಕಿಸ್ತಾನದ ಅಣ್ವಸ್ತ್ರ ಶಸ್ತ್ರಾಗಾರ, ಇತರ ಪ್ರದೇಶಗಳನ್ನು ಹೊಡೆದುರುಳಿಸುವ ಸಾಮರ್ಥ್ಯವಿದೆ: ವಾಯುಪಡೆ ಮುಖ್ಯಸ್ಥ
ಪಾಕಿಸ್ತಾನದಲ್ಲಿರುವ ಅಣ್ವಸ್ತ್ರಗಳನ್ನು ಹಾಗೂ ಇತರ ಗುರಿಗಳನ್ನು ಗುರುತಿಸಿ ಹೊಡೆದುರುಳಿಸುವ ಸಾಮರ್ಥ್ಯ ಭಾರತೀಯ ವಾಯುಪಡೆಗೆ ಇದೆ ಎಂದು ವಾಯುಪಡೆ ಮುಖ್ಯಸ್ಥ ಬಿ.ಎಸ್. ಧನೋವಾ ಹೇಳಿದ್ದಾರೆ.

Published On :
ನವದೆಹಲಿ: ಪಾಕಿಸ್ತಾನದಲ್ಲಿರುವ ಅಣ್ವಸ್ತ್ರಗಳನ್ನು ಹಾಗೂ ಇತರ ಗುರಿಗಳನ್ನು ಗುರುತಿಸಿ ಹೊಡೆದುರುಳಿಸುವ ಸಾಮರ್ಥ್ಯ ಭಾರತೀಯ ವಾಯುಪಡೆಗೆ ಇದೆ ಎಂದು ವಾಯುಪಡೆ ಮುಖ್ಯಸ್ಥ ಬಿ.ಎಸ್. ಧನೋವಾ ಹೇಳಿದ್ದಾರೆ.
ಪಾಕಿಸ್ತಾನದ ಅಣ್ವಸ್ತ್ರಗಳ ಕುರಿತು ಉಂಟಾಗುತ್ತಿರುವ ಜಾಗತಿಕ ಮಟ್ಟದ ಆತಂಕದ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ವಾಯುಪಡೆ ಮುಖ್ಯಸ್ಥ ಬಿಎಸ್ ಧನೋವಾ, ಅಗತ್ಯವಾದರೆ ಪಾಕಿಸ್ತಾನದ ಅಣ್ವಸ್ತ್ರ ಶಸ್ತ್ರಾಗಾರವನ್ನು ಗುರುತಿಸಿ ನಾಶ ಮಾಡುತ್ತೇವೆ ಎಂದು ಹೇಳಿದ್ದಾರೆ.
ಶತ್ರುಗಳು ಅಣ್ವಸ್ತ್ರವನ್ನು ಪ್ರಯೋಗಿಸಲು ಮುಂದಾದರೆ ಅವರ ಅಣ್ವಸ್ತ್ರ ಶಸ್ತ್ರಾಗಾರವೂ ಸೇರಿದಂತೆ ಬೇರೆ ಪ್ರದೇಶಗಳನ್ನು ಗುರುತಿಸಿ ಹೊಡೆದುರುಳಿಸುತ್ತೇವೆ, ಆ ಸಾಮರ್ಥ್ಯ ಭಾರತೀಯ ವಾಯುಪಡೆಗೆ ಇದೆ ಯಾವುದೇ ಪರಿಸ್ಥಿತಿ, ಸವಾಲುಗಳು ಎದುರಾದರೂ ಅದನ್ನು ಎದುರಿಸಲು, ದಿಟ್ಟ ಉತ್ತರ ನೀಡಲು ನಮ್ಮ ಸೇನಾಪಡೆ ಸಿದ್ಧವಾಗಿದೆ. ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


