ದೇಶ

ದೆಹಲಿಯ ಖಾಸಗಿ ಶಾಲೆಯಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ರಾಷ್ಟ್ರ ರಾಜಧಾನಿ ದೆಹಲಿಯ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ....

ದೆಹಲಿಯ ಖಾಸಗಿ ಶಾಲೆಯಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಗುರುವಾರ ವರದಿಯಾಗಿದೆ. 
ದೆಹಲಿಯ ಮಾಳವೀಯ ನಗರದ ಸಂತ ನಿರಂಕಾರಿ ಪಬ್ಲಿಕ್‌ ಸ್ಕೂಲ್‌ನ ಹೌಸ್‌ಕೀಪಿಂಗ್‌ ಸಿಬ್ಬಂದಿ, ವಿಕೃತ ಕಾಮಿ ರಾಕೇಶ್‌ ಒಂದನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಎಎನ್ಐ ವರದಿ ಮಾಡಿದೆ.
ನಿನ್ನೆ ಮಧ್ಯಾಹ್ನ 2.30ರ ಸುಮಾರಿಗೆ ಬಾಲಕಿ ಶೌಚಾಲಯಕ್ಕೆ ಹೋಗಿದ್ದಾಗ ನೆರವಿಗಾಗಿ ಮಹಿಳಾ ಸಿಬ್ಬಂದಿಯನ್ನು ಕೂಗಿಕೊಂಡಿದ್ದಳು. ಆ ಸಮಯದಲ್ಲಿ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಇರಲಿಲ್ಲ. ಆದರೆ ಬಾಲಕಿಯ ಕರೆಯನ್ನು ಕೇಳಿಸಿಕೊಂಡ ರಾಕೇಶ್‌, ಶೌಚಾಲಯದೊಳಗೆ ಹೋಗಿ ಬಾಲಕಿಗೆ ನೆರವಾಗುವ ನೆಪದಲ್ಲಿ ಆಕೆಯ ಗುಪ್ತಾಂಗದ ಮೇಲೆ ಕೈಯಾಡಿಸುವ ಮೂಲಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. 
ಬಾಲಕಿ ಮನೆಗೆ ಮರಳಿದ ನಂತರ ರಾಕೇಶ್‌ ಕೃತ್ಯದ ಬಗ್ಗೆ ತನ್ನ ಹೆತ್ತವರಿಗೆ ತಿಳಿಸಿದ್ದಾಳೆ. ಪೋಷಕರು ಕೂಡಲೇ ಶಾಲಾ ಪ್ರಾಚಾರ್ಯರಿಗೆ ಮಾಹಿತಿ ನೀಡಿ, ಪೊಲೀಸರಿಗೆ ದೂರು ನೀಡಿದ್ದಾರೆ.
ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿ ವಿಕೃತ ಕಾಮಿ ರಾಕೇಶ್‌ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.