ಉತ್ತರ ಪ್ರದೇಶದ ಕಾನೂನು ಸುವ್ಯವಸ್ಥೆ ಸುಧಾರಿಸಬೇಕಿದೆ: ರಾಜ್ಯಪಾಲರು
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪರಿಸ್ಥಿತಿಯ ಸುಧಾರಣೆ ಅಗತ್ಯವಿದೆ ಎಂದು ಉತ್ತರ ಪ್ರದೇಶದ ರಾಜ್ಯಪಾಲ ರಾಮ್ ನಾಯ್ಕ್ ಹೇಳಿದ್ದಾರೆ.

Published On :
ಲಖನೌ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪರಿಸ್ಥಿತಿಯ ಸುಧಾರಣೆ ಅಗತ್ಯವಿದೆ ಎಂದು ಉತ್ತರ ಪ್ರದೇಶದ ರಾಜ್ಯಪಾಲ ರಾಮ್ ನಾಯ್ಕ್ ಹೇಳಿದ್ದಾರೆ.
ಈ ಹಿಂದೆಯೂ ನಾನು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಮಾತನಾಡುತ್ತಿದ್ದೆ, ಕಾನೂನು ಸುವ್ಯವಸ್ಥೆ ಸುಧಾರಣೆಯಾಗಬೇಕಿದೆ ಎಂದು ಈಗಲೂ ಹೇಳುತ್ತೇನೆಂದು ರಾಮ್ ನಾಯ್ಕ್ ಹೇಳಿದ್ದಾರೆ. ಮಹಿಳೆಯರಿಗೆ ಸುರಕ್ಷತೆಯ ಜೀವನ ನಡೆಸುವ ಎಲ್ಲಾ ಹಕ್ಕು ಇದೆ, ಸರ್ಕಾರ ಹಾಗೂ ಪೊಲೀಸರು ಮಹಿಳೆಯರಿಗೆ ಸುರಕ್ಷತೆ ನೀಡಬೇಕು ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ ಬೆಳೆ ಪರಿಹಾರ ಯೋಜನೆಯಡಿಯಲ್ಲಿ ರೈತರಿಗೆ ಅತ್ಯಲ್ಪ ಪ್ರಮಾಣದ ಹಣವನ್ನು ನೀಡುತ್ತಿರುವುದರ ಬಗ್ಗೆಯೂ ರಾಮ್ ನಾಯ್ಕ್ ಪ್ರತಿಕ್ರಿಯೆ ನೀಡಿದ್ದು, ರೈತರಿಗೆ ಕೇವಲ 2 ಹಾಗೂ 5 ರೂಪಾಯಿ ನೀಡುತ್ತಿರುವುದರ ಬಗ್ಗೆ ಸ್ಪಷ್ಟ ಸಾಕ್ಷ್ಯಾಧಾರಗಳಿದ್ದಲ್ಲಿ ನನ್ನ ಗಮನಕ್ಕೆ ತನ್ನಿ ಎಂದೂ ಮಾಧ್ಯಮಗಳಿಗೆ ರಾಮ್ ನಾಯ್ಕ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ರಾಜ್ಯಪಾಲUttar pradeshಉತ್ತರ ಪ್ರದೇಶರಾಮ್ ನಾಯ್ಕ್ಕಾನೂನು ಸುವ್ಯವಸ್ಥೆGovernor Ram Naiklaw and order situation
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


