ದೇಶ

ಪತಿ ನಟರಾಜನ್ ಗೆ ಅನಾರೋಗ್ಯ: ಶಶಿಕಲಾಗೆ ಇಂದು ಪೆರೋಲ್ ಸಾಧ್ಯತೆ!

ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲುಪಾಲಾಗಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ಶುಕ್ರವಾರ ಪೆರೋಲ್ ಮಂಜೂರಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಪತಿ ನಟರಾಜನ್ ಗೆ ಅನಾರೋಗ್ಯ: ಶಶಿಕಲಾಗೆ ಇಂದು ಪೆರೋಲ್ ಸಾಧ್ಯತೆ!
ಸಂಗ್ರಹ ಚಿತ್ರ
Published On :
ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲುಪಾಲಾಗಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ಶುಕ್ರವಾರ ಪೆರೋಲ್ ಮಂಜೂರಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಶಶಿಕಲಾ ಅವರ ಪತಿ ಎಂ ನಟರಾಜನ್ ಅವರು ಅನಾರೋಗ್ಯಕ್ಕೀಡಾಗಿದ್ದು, ಚೆನ್ನೈನ ಗ್ಲೆನಿಗಲ್ಸ್ ಗ್ಲೋಬಲ್ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗಷ್ಟೇ ಅವರಿಗೆ ಅಂಗ ಕಸಿ ಶಸ್ತ್ರ ಚಿಕಿತ್ಸೆಯಾಗಿತ್ತು. ಇದೇ  ಕಾರಣಕ್ಕೆ ಶಶಿಕಲಾ ಈ ಹಿಂದೆ ಪೆರೋಲ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇದೀಗ ಅವರ ಅರ್ಜಿಯನ್ನು ಅಧಿಕಾರಿಗಳು ಪುರಸ್ಕರಿಸುವ ಸಾಧ್ಯತೆ ಇದ್ದು, ಇಂದು ಪೆರೋಲ್ ಮೇಲೆ ಶಶಿಕಲಾ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು  ಹೇಳಲಾಗುತ್ತಿದೆ.

ಈ ಬಗ್ಗೆ ಶಶಿಕಲಾ ಆಪ್ತ ಮತ್ತು ಸಂಬಂಧಿ ಟಿಟಿವಿ ದಿನಕರನ್ ಮಾಹಿತಿ ನೀಡಿದ್ದು, ಪತಿಯ ಆರೋಗ್ಯವನ್ನು ವಿಚಾರಿಸಿಕೊಳ್ಳಲು ಶಶಿಕಲಾ ಅವರು ಪೆರೋಲ್​ ಮೇಲೆ ಹೊರ ಬರುತ್ತಿರುವುದಾಗಿ ಹೇಳಿದ್ದಾರೆ. 'ಶಶಿಕಲಾ ಅವರು ನಾಳೆ  ಪೆರೋಲ್​ ಮೇಲೆ ಹೊರಬರುವ ಸಂಭವವಿದ್ದು, ಶಶಿಕಲಾ ಪರ ವಕೀಲರು 15 ದಿನದ ಪೆರೋಲ್​ ನೀಡುವಂತೆ ಕೇಳಿದ್ದಾರೆ, ಆದರೆ ಎಷ್ಟು ದಿನ ಸಿಗುತ್ತದೋ ಎಂಬುದು ಇನ್ನೂ ಖಚಿತವಾಗಿಲ್ಲ' ಎಂದು ಟಿಟಿವಿ ದಿನಕರನ್​  ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅಂದಹಾಗೆ ಶಶಿಕಲಾ ಅವರು ಅಕ್ರಮ ಆಸ್ತಿ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.