ಎರಡೆಲೆ ಚಿಹ್ನೆ ವಿವಾದ: ಟಿಟಿವಿ ದಿನಕರನ್ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಎಐಎಡಿಎಂಕೆ ಪಕ್ಷದ ಅಧಿಕೃತ "ಎರಡೆಲೆ ಚಿಹ್ನೆ' ವಿವಾದಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ....

Published On :
ನವದೆಹಲಿ: ಎಐಎಡಿಎಂಕೆ ಪಕ್ಷದ ಅಧಿಕೃತ "ಎರಡೆಲೆ ಚಿಹ್ನೆ' ವಿವಾದಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಎಐಎಡಿಎಂಕೆ ಬಂಡಾಯ ನಾಯಕ ಟಿಟಿವಿ ದಿನಕರನ್ ಅವರ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ದಿನಕರನ್ ಅರ್ಜಿಯನ್ನು ವಜಾಗೊಳಿಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂ ಪೀಠ, ಎರಡೆಲೆ ಚಿಹ್ನೆ ವಿವಾದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಇಂದು ವಿಚಾರಣೆ ನಡೆಸುಬಹುದು ಎಂದು ಸ್ಪಷ್ಟಪಡಿಸಿದೆ.
ಮದ್ರಾಸ್ ಹೈಕೋರ್ಟ್ ನ ಮದುರೈ ಪೀಠ ಅಕ್ಟೋಬರ್ 31ರೊಳಗೆ ಎರಡೆಲೆ ವಿವಾದವನ್ನು ಇತ್ಯರ್ಥಪಡಿಸುವಂತೆ ಚುನಾವಣಾ ಆಯೋಗಕ್ಕೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ದಿನಕರನ್ ಅವರು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅಲ್ಲದೆ ಆಯೋಗಕ್ಕೆ ಪ್ರತಿಕ್ರಿಯೆ ಸಲ್ಲಿಸಲು ನಾಲ್ಕು ತಿಂಗಳ ಕಾಲವಕಾಶಬೇಕು ಎಂದು ಮನವಿ ಮಾಡಿದ್ದರು.
ಎಐಎಡಿಎಂಕೆಯ ಎರಡು ಬಣಗಳು ಎರಡೆಲೆ ಚಿಹ್ನೆ ತಮಗೇ ಸೇರಿದ್ದೆಂದು ವಿವಾದವನ್ನು ಸೃಷ್ಟಿಸಿದ್ದ ಹಿನ್ನೆಲೆಯಲ್ಲಿ ಆರು ತಿಂಗಳ ಹಿಂದೆ ಈ ಚಿಹ್ನೆಯನ್ನು ಚುನಾವಣಾ ಆಯೋಗ ಸ್ಥಗಿತಗೊಳಿಸಿತ್ತು.
ಸೆ.29ರೊಳಗೆ ತಮ್ಮ ತಾಜಾ ಉತ್ತರಗಳನ್ನು ಸಲ್ಲಿಸುವಂತೆ ಚುನಾವಣಾ ಆಯೋಗ ದಿನಕರನ್ ಹಾಗೂ ಮುಖ್ಯಮಂತ್ರಿ ಇ ಪಳನಿಸ್ವಾಮಿ ಬಣಗಳಿಗೆ ಸೂಚಿಸಿತ್ತು. ಆದರೆ ದಿನಕರನ್ ಅವರು ಪ್ರತಿಕ್ರಿಯೆ ಸಲ್ಲಿಸಲು ಹೆಚ್ಚು ಕಾಲವಕಾಶ ನೀಡಬೇಕು ಎಂದು ಆಯೋಗಕ್ಕೂ ಮನವಿ ಮಾಡಿದ್ದರು. ದಿನಕರನ್ ಮನವಿಯನ್ನು ಚುನಾವಣಾ ಆಯೋಗ ತಿರಸ್ಕರಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


