ಮಕ್ಕಳನ್ನು ಶಾಲೆಗ ಕಳುಹಿಸಿ ಇಲ್ಲ..ಜೈಲಿನಲ್ಲಿ ಮುದ್ದೆ ಮುರಿಯಿರಿ: ಪೋಷಕರಿಗೆ ಸಚಿವರ ಎಚ್ಚರಿಕೆ
ಮಕ್ಕಳನ್ನು ಶಾಲೆಗೆ ಕಳುಹಿಸದ ಮಕ್ಕಳನ್ನು ಜೈಲಿಗೆ ಹಾಕಿ ಮುದ್ದೆ ಮುರಿಯುವಂತೆ ಮಾಡುತ್ತೇನೆ ಎಂದು ಉತ್ತರ ಪ್ರದೇಶ ಸಚಿವ ಓಂಪ್ರಕಾಶ್ ರಾಜ್ ಭರ್ ಪೋಷಕರಿಗೆ ಎಚ್ಚರಿಕೆ ನೀಡಿದ್ದಾರೆ.

Published On :
ಲಖನೌ: ಮಕ್ಕಳನ್ನು ಶಾಲೆಗೆ ಕಳುಹಿಸದ ಮಕ್ಕಳನ್ನು ಜೈಲಿಗೆ ಹಾಕಿ ಮುದ್ದೆ ಮುರಿಯುವಂತೆ ಮಾಡುತ್ತೇನೆ ಎಂದು ಉತ್ತರ ಪ್ರದೇಶ ಸಚಿವ ಓಂಪ್ರಕಾಶ್ ರಾಜ್ ಭರ್ ಪೋಷಕರಿಗೆ ಎಚ್ಚರಿಕೆ ನೀಡಿದ್ದಾರೆ.
ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅಂಗವಿಕಲರ ಸಬಲೀಕರಣ ಇಲಾಖೆಯ ಸಚಿವ ಓಂಪ್ರಕಾಶ್, ಮಕ್ಕಳನ್ನು ಶಾಲೆಗೆ ಕಳುಹಿಸದ ಪೋಷಕರನ್ನು ಜೈಲಿಗೆ ಅಟ್ಟಬೇಕು ಎಂದು ಹೇಳಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಚಿವರ ಹೇಳಿಕೆ ಪರ-ವಿರೋಧದ ಮಾತುಗಳು ಕೇಳಿಬರುತ್ತಿವೆ.
ವಿಡಿಯೋದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿರುವ ಸಟಿವ್ ಓಂ ಪ್ರಕಾಶ್ ರಾಜ್ ಭರ್, "ನಾನು ನನ್ನ ಆಯ್ಕೆಯ ನಿಯಮವೊಂದನ್ನು ಜಾರಿಗೊಳಿಸಲಿದ್ದೇನೆ. ಬಡವರ ಮಕ್ಕಳು ಶಾಲೆಗೆ ಹೋಗದಿದ್ದರೆ ಅವರ ಪೋಷಕರನ್ನು ಐದು ದಿನ ಜೈಲಿನಲ್ಲಿ ಬಂಧಿಸಿಡಲಾಗುತ್ತದೆ. ಅವರಿಗೆ ಅನ್ನ, ಆಹಾರ ನೀಡುವುದಿಲ್ಲ. ಇದುವರೆಗೆ ನಿಮ್ಮ ನಾಯಕ, ಮಗ, ಅಣ್ಣ ನಿಮಗೆ ಅರ್ಥ ಮಾಡಿಸಲು ಪ್ರಯತ್ನಿಸಿದ್ದರು. ಆದರೂ ನಿಮಗೆ ಅರ್ಥವಾಗಿಲ್ಲ ಎಂದಾದರೆ ಇನ್ನೂ ಆರು ತಿಂಗಳು ನಿಮಗೆ ಕಲಿಸಲು ಪ್ರಯತ್ನಿಸುತ್ತೇನೆ" ಎಂದು ನೇರವಾಗಿ ಪೋಷಕರಿಗೆ ಎಚ್ಚರಿಗೆ ನೀಡಿದ್ದಾರೆ.
ತಮ್ಮ ಮಕ್ಕಳನ್ನು ಶಾಲೆಗೆ ಕಳಿಸಲು ನಿರಾಕರಿಸುವ ಪೋಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿರುವ ಓಂಪ್ರಕಾಶ್, ಲಂಕೆಯಲ್ಲಿ ರಾವಣ ಬಂಧಿಸಿಟ್ಟಿರುವ ತನ್ನ ಪತ್ನಿ ಸೀತೆಯನ್ನು ರಕ್ಷಿಸಲು ತಾನು ಲಂಕೆಗೆ ತೆರಳಬೇಕಿದೆ. ಆದ್ದರಿಂದ ದಾರಿ ಮಾಡಿಕೊಡು ಎಂದು ಶ್ರೀರಾಮ ಸಮುದ್ರರಾಜನಲ್ಲಿ ವಿನಂತಿಸಿದಾಗ ಸಮುದ್ರರಾಜ ಒಪ್ಪಲಿಲ್ಲ. ಆಗ ಆಗ ಶ್ರೀರಾಮ ಬಾಣದಿಂದಲೇ ಸೇತುವೆ ಕಟ್ಟಿ ಕಾರ್ಯಸಾಧಿಸಿದ. ಇದೇ ರೀತಿಯಲ್ಲಿ ಮರ್ಯಾದೆಯಲ್ಲಿ ಹೇಳಿದರೆ ಅರ್ಥವಾಗದ ಪೋಷಕರಿಗೆ ಬುದ್ಧಿ ಕಲಿಸಬೇಕಿದೆ. ಇಂತಹ ಪೋಷಕರನ್ನು ಪೊಲೀಸರು ಜೈಲಿಗೆ ಹಾಕುತ್ತಾರೆ. ಇಂತಹ ಪೋಷಕರಿಗೆ ಮರಣದಂಡನೆ ಶಿಕ್ಷೆ ವಿಧಿಸಲೂ ನಾನು ಸಿದ್ಧ ಎಂದು ಸಚಿವರು ಖಾರವಾಗಿ ಹೇಳಿದ್ದಾರೆ.
ಏತನ್ಮಧ್ಯೆ ತಮ್ಮ ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದರೂ ಈ ಹೇಳಿಕೆಗೆ ತಾನು ಬದ್ಧ ಎಂದು ಹೇಳಿಕೊಂಡಿರುವ ಸಚಿವರು, "ಪೋಷಕರನ್ನು ಜೈಲಿಗೆ ಕಳಿಸುತ್ತೇನೆ ಎಂದು ಬೆದರಿಸಿದ್ದರಲ್ಲಿ ತಪ್ಪೇನಿದೆ. ಸರ್ಕಾರ ಎಲ್ಲಾ ಸೌಲಭ್ಯ ಒದಗಿಸುತ್ತಿದ್ದರೂ ಪೋಷಕರು ತಮ್ಮ ಮಕ್ಕಳನ್ನು ಯಾಕೆ ಶಾಲೆಗೆ ಕಳಿಸುತ್ತಿಲ್ಲ" ಎಂದು ಮರು ಪ್ರಶ್ನೆ ಹಾಕಿದ್ದಾರೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.