ದೇಶ

ಗುಜರಾತ್ ರಾಜ್ಯದ ಜನತೆಯನ್ನು ರಾಹುಲ್ ಗಾಂಧಿ ಅವಮಾನಿಸುತ್ತಿದ್ದಾರೆ: ಸ್ಮೃತಿ ಇರಾನಿ

ಗುಜಾರಾತ್ ರಾಜ್ಯದ ಜನತೆಯನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಅವಮಾನಿಸುತ್ತಿದ್ದಾರೆಂದು ಕೇಂದ್ರ ಸಚಿವೆ ಸ್ಮೃತಿ ಇರಾನಿಯವರು ಸೋಮವಾರ ಹೇಳಿದ್ದಾರೆ...

ಗುಜರಾತ್ ರಾಜ್ಯದ ಜನತೆಯನ್ನು ರಾಹುಲ್ ಗಾಂಧಿ ಅವಮಾನಿಸುತ್ತಿದ್ದಾರೆ: ಸ್ಮೃತಿ ಇರಾನಿ
ಕೇಂದ್ರ ಸಚಿವೆ ಸ್ಮೃತಿ ಇರಾನಿ
Published On :

ನವದೆಹಲಿ: ಗುಜಾರಾತ್ ರಾಜ್ಯದ ಜನತೆಯನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಅವಮಾನಿಸುತ್ತಿದ್ದಾರೆಂದು ಕೇಂದ್ರ ಸಚಿವೆ ಸ್ಮೃತಿ ಇರಾನಿಯವರು ಸೋಮವಾರ ಹೇಳಿದ್ದಾರೆ. 

ನಿನ್ನೆಯಷ್ಟೇ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಬಿಜೆಪಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ್ದರು. 

ಗುಜರಾತ್ ರಾಜ್ಯದಲ್ಲಿ ವಿಕಾಸದ ಕಥೆ ಏನಾಯಿತು? ಇದೆಂಥಾ ಹುಚ್ಚುತನ? ಸುಳ್ಳುಗಳನ್ನು ಕೇಳಿ ಕೇಳಿ ಅಭಿವೃದ್ಧಿಗೆ ಹುಚ್ಚು ಹಿಡಿದಂತಾಗಿದೆ. ಪ್ರಧಾನಮಂದ್ರಿ ನರೇಂದ್ರ ಮೋದಿಯವರ ಗುಜರಾತ್ ಮಾದರಿ ಸಂಪೂರ್ಣವಾಗಿ ವಿಫಲಗೊಂಡಿದೆ. ಈ ಕುರಿತ ಸತ್ಯ ಇಡೀ ರಾಜ್ಯದ ಜನತೆಗೆ ತಿಳಿದಿದೆ ಎಂದು ಹೇಳಿದ್ದರು. 

ಈ ಹೇಳಿಕೆ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಸ್ಮೃತಿ ಇರಾನಿಯವರು, ಅಗತ್ಯ ಸೌಕರ್ಯಗಳಿಲ್ಲದೆ ಅಮೇಥಿ ಜನ ಇಂದಿಗೂ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಗುಜರಾತ್ ಅಭಿವೃದ್ಧಿ ಕುರಿತಂತೆ ಟೀಕೆ ಮಾಡುತ್ತಿರುವವರು ಮೊದಲು ಅಮೇಥಿಯಲ್ಲಿರುವ ಜನತೆ ಪರಿಸ್ಥಿತಿ ಕುರಿತಂತೆ ಪ್ರತಿಕ್ರಿಯೆ ನೀಡಲಿ ಎಂದು ಹೇಳಿದ್ದಾರೆ. 

ಗುಜರಾತ್ ರಾಜ್ಯದ ನಾಯಕರನಾಗ ಸರ್ದಾರ್ ಪಟೇಲ್ ಮತ್ತು ಮೊರಾರ್ಜಿ ದೇಸಾಯಿಯಂತಹವರು ನೆಹರು-ಗಾಂಧಿ ಕುಟುಂಬದಿಂದ ಅವಮಾನಿಸಲ್ಪಟ್ಟಿದ್ದರು. ಹಲವು ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷ, ಪ್ರಮುಖವಾಗಿ ನೆಹರು-ಗಾಂಧಿ ಕುಟುಂಬ ಗುಜರಾತ್ ವಿರುದ್ಧವಿದೆ. ಅಧಿಕಾರದಲ್ಲಿದ್ದ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿತ್ತು. ಇದೀಗ ವಿರೋಧ ಪಕ್ಷವಾಗಿದ್ದು, ಗುಜರಾತ್ ರಾಜ್ಯದ ಜನತೆಗೆ ಅವಮಾನ ಮಾಡುತ್ತಿದೆ. 

ಕಾಂಗ್ರೆಸ್ ಪಕ್ಷದ ಈ ವರ್ತನೆಗೆ ಗುಜರಾತ್ ರಾಜ್ಯ ಜನತೆ ದಿಟ್ಟ ಉತ್ತರವನ್ನೇ ನೀಡಲಿದೆ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಐತಿಹಾಸಿಕ ಸೋಲನ್ನು ಕಾಣಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.