ಗುಜರಾತ್ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಡ್ಯಾನ್ಸ್
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತವರು ರಾಜ್ಯ ಗುಜರಾತ್'ಗೆ ಪ್ರವಾಸ ಕೈಗೊಂಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಮಂಗಳವಾರ ಸಂಜೆ ಟಮ್ಲಿ...

Published On :
ಅಹಮದಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತವರು ರಾಜ್ಯ ಗುಜರಾತ್'ಗೆ ಪ್ರವಾಸ ಕೈಗೊಂಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಮಂಗಳವಾರ ಸಂಜೆ ಟಮ್ಲಿ ಎಂಬ ಜಾನಪದ ಶೈಲಿಯ ಡ್ಯಾನ್ಸ್'ಗೆ ಹೆಜ್ಜೆ ಹಾಕಿದ್ದಾರೆ.
ತಲೆಯ ಮೇಲೆ ಕಳಸದಾಕಾರದ ಪೇಟವನ್ನು ಧರಿಸಿ ಕೈಯಲ್ಲಿ ಮದ್ದಳೆ ಹಿಡಿದು ಹೆಜ್ಜೆ ಹಾಕುತ್ತಿದ್ದವರ ಗುಂಪಿನಲ್ಲಿ ಸಾಮಾನ್ಯ ವ್ಯಕ್ತಿಯಂತೆ ಸೇರಿಕೊಂಡ ರಾಹುಲ್ ಗಾಂಧಿಯವರು ತಾವೂ ಸಹ ಕೈಯಲ್ಲಿ ಡೋಲು ಬಾರಿಸುತ್ತಾ ನೃತ್ಯ ಮಾಡಿದರು.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತೊಡಗಿಕೊಂಡು ರಾಹುಲ್ ಗಾಂಧಿಯವರು ನೃತ್ಯ ಮಾಡಿರುವ ವಿಡಿಯೋವನ್ನು ಸ್ವತಃ ಕಾಂಗ್ರೆಸ್ ಪಕ್ಷವೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಹಂಚಿಕೊಂಡಿದೆ.
ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷ ಈಗಾಗಲೇ ಹಲವಾರು ಕಸರತ್ತುಗಳನ್ನು ಆರಂಭಿಸಿದೆ. ಪ್ರಚಾರ ಕಾರ್ಯಕ್ಕಾಗಿ ಮೂರು ದಿನಗಳ ಕಾಲ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಗುಜರಾತ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ನವಸರ್ಜನ್ ಯಾತ್ರೆಯ 2ನೇ ದಿನವಾದ ನಿನ್ನೆ ವಡೋದರಾದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿರುವ ಅವರು ಬಿಜೆಪಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಟೀಕಾಪ್ರಹಾರ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


