ಆರ್'ಎಸ್ಎಸ್ ಮಹಿಳೆಯರ ಕುರಿತು ರಾಹುಲ್ ಹೇಳಿಕೆ ಅಸಭ್ಯ: ಸ್ಮೃತಿ ಇರಾನಿ ಕಿಡಿ
ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆಗಳಲ್ಲಿ ಚಡ್ಡಿ ಧರಿಸಿದ ಮಹಿಳೆಯರನ್ನು ನೋಡಿದ್ದೀರಾ? ಎಂಬ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಹೇಳಿಕೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ...

Published On :
ಅಮೇಥಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆಗಳಲ್ಲಿ ಚಡ್ಡಿ ಧರಿಸಿದ ಮಹಿಳೆಯರನ್ನು ನೋಡಿದ್ದೀರಾ? ಎಂಬ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಹೇಳಿಕೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ತೀವ್ರವಾಗಿ ಕಿಡಿಕಾರಿದ್ದಾರೆ.
ರಾಹುಲ್ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಆರ್'ಎಸ್ಎಸ್ ಸಂಘಟನೆಯ ಮಹಿಳೆಯರ ಕುರಿತಂತೆ ರಾಹುಲ್ ಗಾಂಧಿಯವರು ನೀಡಿರುವ ಹೇಳಿಕೆ ಅಸಭ್ಯವಾದದ್ದು ಎಂದು ತಿರುಗೇಟು ನೀಡಿದ್ದಾರೆ.
ಒಂದು ವೇಳೆ ಭಾರತದಲ್ಲಿ ಮಹಿಳೆಯಾಗಿ ಚಡ್ಡಿ ತೊಡುವುದು ಸಬಲೀಕರಣದ ಲಕ್ಷಣ ಎಂದು ರಾಹುಲ್ ಗಾಂಧಿ ನಂಬಿದ್ದರೆ, ನಾನು ಅದಕ್ಕೆ ವಿರುದ್ಧವಾಗಿದ್ದೇನೆ ಎಂದು ತಿಳಿಸಿದ್ದಾರೆ.
ಇಂದು ಸಂಘ ಪರಿವಾರದ ಜೊತೆಗೆ ಗುರ್ತಿಸಿಕೊಂಡಿರುವ ನಮ್ಮ ಸೋದರಿಯರು, ಪತ್ನಿಯರು ಮತ್ತು ಸೊಸೆಯರ ವಿರುದ್ಧ ಅಸಭ್ಯ ಹೇಳಿಕೆ ನೀಡಲಾಗುತ್ತಿದೆ ಎಂದು ಹರಿಹಾಯ್ದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


