ದೇಶ

ಜಡೆ ಕತ್ತರಿಸುವ ಪ್ರಕರಣ: ಶ್ರೀನಗರದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಕಾಶ್ಮೀರದಲ್ಲಿ ಜಡೆ ಕತ್ತರಿಸುವ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿ ಸ್ಥಳೀಯರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ ಎಂದು ಬುಧವಾರ ತಿಳಿದುಬಂದಿದೆ...

ಜಡೆ ಕತ್ತರಿಸುವ ಪ್ರಕರಣ: ಶ್ರೀನಗರದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ
ಸಂಗ್ರಹ ಚಿತ್ರ
Published On :
ಶ್ರೀನಗರ: ಕಾಶ್ಮೀರದಲ್ಲಿ ಜಡೆ ಕತ್ತರಿಸುವ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿ ಸ್ಥಳೀಯರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ ಎಂದು ಬುಧವಾರ ತಿಳಿದುಬಂದಿದೆ. 
ದುಷ್ಕರ್ಮಿಗಳ ತಂಡವೊಂದು ಇಂದು ಬೆಳಿಗ್ಗೆ ಮಹಿಳೆಯೊಬ್ಬರ ಜಡೆಯನ್ನು ಕತ್ತರಿಸಿದ್ದರು. ಶ್ರೀನಗರದಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಹೆಚ್ಚಾಗುತ್ತಿದ್ದರೂ ಪೊಲೀಸರು ಯಾವುದೇ ರೀತಿಯ ಕ್ರಮ ಕೈಗೊಳ್ಳದೆ ಇರುವುದಕ್ಕೆ ವಿರೋಧ ವ್ಯಕ್ತಪಡಿಸಿ ಬಟಮಲೂ ಪ್ರದೇಶದಲ್ಲಿರುವ ಸ್ಥಳೀಯರು ಪ್ರತಿಭಟನೆಗಿಳಿದಿದ್ದರು. 

ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಬಳಿಕ ಪೊಲೀಸರು ಪ್ರತಿಭಟನಾ ಸ್ಥಳವನ್ನು ತೊರೆಯುವಂತೆ ಪ್ರತಿಭಟನಾಕಾರರಿಗೆ ಸೂಚಿಸಿದ್ದಾರೆ. ಈ ವೇಳೆ ಕೆಲವರು ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳದಲ್ಲಿ ಹಿಂಸಾಚಾರ ಸೃಷ್ಟಿಯಾದ ಹನ್ನಲೆಯಲ್ಲಿ ಸ್ಥಳೀಯ ಮಾರುಕಟ್ಟೆಗಳನ್ನು ಬಂದ್ ಮಾಡಿಸಲಾಗಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.