ಡಿಜಿಟಲ್ ಇಂಡಿಯಾದಿಂದ ಭಾರತದ ಜಿಡಿಪಿ ಬೆಳವಣಿಗೆಗೆ ಸಹಕಾರ: ಸಚಿವ ಕೆಜೆ ಅಲ್ಫೋನ್ಸ್
ಡಿಜಿಟಲ್ ಇಂಡಿಯಾ ಯೋಜನೆ 2025 ರ ವೇಳೆಗೆ ಭಾರತದ ಜಿಡಿಪಿ ಬೆಳವಣಿಗೆಗೆ ಶೇ.20-30 ರಷ್ಟು ಕೊಡುಗೆ ನೀಡುವ ಸಾಮರ್ಥ್ಯ ಹೊಂದಿದೆ ಎಂದು ಐಟಿ ಹಾಗೂ ಎಲೆಕ್ಟ್ರಾನಿಕ್ಸ್ ಖಾತೆಯ ರಾಜ್ಯ ಸಚಿವ ಕೆಜೆ ಅಲ್ಫಾನ್ಸ್

Published On :
ನವದೆಹಲಿ: ಡಿಜಿಟಲ್ ಇಂಡಿಯಾ ಯೋಜನೆ 2025 ರ ವೇಳೆಗೆ ಭಾರತದ ಜಿಡಿಪಿ ಬೆಳವಣಿಗೆಗೆ ಶೇ.20-30 ರಷ್ಟು ಕೊಡುಗೆ ನೀಡುವ ಸಾಮರ್ಥ್ಯ ಹೊಂದಿದೆ ಎಂದು ಐಟಿ ಹಾಗೂ ಎಲೆಕ್ಟ್ರಾನಿಕ್ಸ್ ಖಾತೆಯ ರಾಜ್ಯ ಸಚಿವ ಕೆಜೆ ಅಲ್ಫಾನ್ಸ್ ಹೇಳಿದ್ದಾರೆ.
ಡಿಜಿಟಲ್ ಇಂಡಿಯಾದ ಅಡಿಯಲ್ಲಿ ರೂಪಿಸಲಾಗಿರುವ ಯೋಜನೆಗಳು ಕಾರ್ಯರೂಪಕ್ಕೆ ಬರಲು ಸಿದ್ಧವಾಗಿವೆ. ಈಗಾಗಲೇ ಜಾರಿಗೊಂಡಿರುವ ಹಲವು ಕ್ರಮಗಳು ಜನತೆ ಹಾಗೂ ಅವರ ಉದ್ಯಮದ ಮೇಲೆ ಪರಿಣಾಮ ಬೀರಿವೆ ಎಂದು ಅಲ್ಫಾನ್ಸ್ ಹೇಳಿದ್ದಾರೆ.
ಅಸೋಚಾಮ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಅವರು, ಕ್ಲೌಡ್ ಸರ್ವೀಸ್, ಡಿಜಿಲಾಕರ್ ಈಗ ಮಿಲಿಯನ್ ಗಟ್ಟಲೆ ಬಳಕೆದಾರರನ್ನು ಹೊಂದಿದೆ. ಸರ್ಕಾರದೊಂದಿಗೆ ಸಂವಹನ ನಡೆಸುವುದಕ್ಕಾಗಿ ಕಲ್ಪಿಸಲಾಗಿದ್ದ ಮೈಗೌರ್ನಮೆಂಟ್ ಆಪ್ ನ್ನು 1 ಮಿಲಿಯನ್ ಜನರು ಬಳಕೆ ಮಾಡುತ್ತಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


