ದೇಶ

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ: ಡಿ.9 ಮತದಾನ, ಡಿ.18 ಫಲಿತಾಂಶ

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗದ ಆಯುಕ್ತ ಎಕೆ ಜ್ಯೋತಿ ಅವರು ಘೋಷಿಸಿದ್ದಾರೆ...

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ: ಡಿ.9 ಮತದಾನ, ಡಿ.18 ಫಲಿತಾಂಶ
ಚುನಾವಣೆ
Published On :
ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗದ ಆಯುಕ್ತ ಎಕೆ ಜ್ಯೋತಿ ಅವರು ಘೋಷಿಸಿದ್ದಾರೆ. 
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಆಯೋಗದ ಆಯುಕ್ತ ಎಕೆ ಜ್ಯೋತಿ ಅವರು ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 9ರಂದು ಚುನಾವಣೆ ನಡೆಯಲಿದ್ದು ಡಿಸೆಂಬರ್ 18ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದರು. 
ಚುನಾವಣೆಗಾಗಿ 7521 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಎಲ್ಲಾ ಮತಗಟ್ಟೆಗಳಲ್ಲಿಯೂ ಮತಯಂತ್ರಗಳ ಜತೆ ಮತದಾನ ದೃಢೀಕರಣ ರಸೀದಿ ವ್ಯವಸ್ಥೆಯನ್ನು(ವಿವಿಪಿಎಟಿ)ಯನ್ನು ಅಳವಡಿಸಲಾಗುವುದು. ಚುನಾವಣೆ ಹಿನ್ನೆಲೆ ಹಿಮಾಚಲ ಪ್ರದೇಶದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದರು. 
ಇನ್ನು ಇಂದೇ ಗುಜರಾತ್ ವಿಧಾನಸಭಾ ಚುನಾವಣೆಗೂ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂಬ ವರದಿಗಳು ಬಿತ್ತರವಾಗಿದ್ದವು. ಇದೀಗ ಇದಕ್ಕೆ ಸ್ಪಷ್ಟನೆ ನೀಡಿರುವ ಆಯುಕ್ತರು ಸದ್ಯ ಹಿಮಾಚಲ ಪ್ರದೇಶದ ಚುನಾವಣೆಗೆ ಮಾತ್ರ ದಿನಾಂಕ ಘೋಷಿಸಲಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.