ಯುವತಿ ಹಿಂಬಾಲಿಸಿದ ಪ್ರಕರಣ: ವಿಕಾಸ್ ಬರಾಲಾ, ಆಶೀಶ್ ವಿರುದ್ಧ ಅಪಹರಣ ಕೇಸ್
ಹಿರಿಯ ಐಎಎಸ್ ಅಧಿಕಾರಿಯೊಬ್ಬರ ಪುತ್ರಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ....

Published On :
ಚಂಡೀಗಢ: ಹಿರಿಯ ಐಎಎಸ್ ಅಧಿಕಾರಿಯೊಬ್ಬರ ಪುತ್ರಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ಬರಾಲಾ ಅವರ ಪುತ್ರ ವಿಕಾಸ್ ಬರಾಲಾ ಹಾಗೂ ಆತನ ಸ್ನೇಹಿತ ಆಶೀಶ್ ಅವರ ವಿರುದ್ಧ ಚಂಡೀಗಢ ಕೋರ್ಟ್ ಹಿಂಬಾಲಿಸಿದ ಮತ್ತು ಅಪಹರಣ ಯತ್ನ ಆರೋಪ ದಾಖಲಿಸಿಕೊಂಡಿದೆ.
ಎಫ್ ಐಆರ್ ನಲ್ಲಿ ಉಲ್ಲೇಖಿಸಿದ ಎಲ್ಲಾ ಆರೋಪಗಳನ್ನು ಪೊಲೀಸರು ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ದಾಖಲಿಸಲಾಗಿದೆ ಎಂದು ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಬರ್ಜಿಂದರ್ ಪಾಲ್ ಸಿಂಗ್ ಅವರು ಹೇಳಿದ್ದಾರೆ.
ಕಳೆದ ಆಗಸ್ಟ್ 15ರಂದು ಚಂಡೀಗಢದ ಯುವತಿ ವರ್ನಿಕಾ ಕುಂದು ಅವರ ಕಾರನ್ನು ಹಿಂಬಾಲಿಸಿ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂಡೀಗಢ ಪೊಲೀಸರು ವಿಕಾಸ್ ಬರಾಲಾ ಮತ್ತು ಆತನ ಸ್ನೇಹಿತ ಆಶೀಶ್ ನನ್ನು ಬಂಧಿಸಿದ್ದಾರೆ.
ಬಿಜೆಪಿ ನಾಯಕನ ಪುತ್ರ ಹಾಗೂ ಆತನ ಸ್ನೇಹಿತನ ವಿರುದ್ಧ ಐಪಿಸಿ ಸೆಕ್ಷೆನ್ 365 (ಅಪಹರಣ ಯತ್ನ) ಹಾಗೂ 511ರಡಿ ಕೇಸ್ ದಾಖಲಿಸಿಕೊಳ್ಳಲಾಗಿದೆ.
ಚಂಡೀಗಢದ ಹೆದ್ದಾರಿಯಲ್ಲಿ ವಿಕಾಸ್ ಬರಾಲಾ ಹಾಗೂ ಆತನ ಸ್ನೇಹಿತ ಆಶೀಶ್ ವರ್ನಿಕಾ ಕುಂದು ಅವರ ಕಾರನ್ನು ಹಿಂಬಾಲಿಸಿದ್ದಲ್ಲದೇ, ಆಕೆಯನ್ನು ಅಪಹರಿಸಲು ಯತ್ನಿಸಿದ್ದರು. ಈ ಘಟನೆ ದೇಶದಾದ್ಯಂತ ಭಾರೀ ಸುದ್ದಿಗೆ ಗ್ರಾಸವಾಗಿತ್ತು.
ಒಂದು ವೇಳೆ ಆರೋಪಿಗಳ ವಿರುದ್ಧದ ಅಪಹರಣ ಯತ್ನ ಆರೋಪ ಸಾಬೀತಾದರೆ ವಿಕಾಸ್ ಬರಾಲಾ ಹಾಗೂ ಆಶೀಶ್ ಗೆ ಜೀವಾವಧಿ ಶಿಕ್ಷೆಯಾಗುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


