ಸಂಜೆ ವೇಳೆ ಮಾತ್ರ ಪಟಾಕಿ ಬಳಕೆಗೆ ಅವಕಾಶ: ಪಂಜಾಬ್-ಹರ್ಯಾಣ ಕೋರ್ಟ್!
ವಾಯು ಮಾಲೀನ್ಯ ತಡೆಗೆ ದೆಹಲಿ ಮಾದರಿಯಲ್ಲಿ ಕ್ರಮಕ್ಕೆ ಮುಂದಾಗಿರುವ ಪಂಜಾಬ್-ಹರ್ಯಾಣ ಕೋರ್ಟ್ ದೀಪಾವಳಿ ಸಂದರ್ಭದಲ್ಲಿ ಸಂಜೆ ವೇಳೆ ಮಾತ್ರ ಪಟಾಕಿ ಸಿಡಿಸಲು ಅನುಮತಿ ನೀಡುವುದಾಗಿ ಹೇಳಿದೆ.

ಚಂಡೀಘಡ: ವಾಯು ಮಾಲೀನ್ಯ ತಡೆಗೆ ದೆಹಲಿ ಮಾದರಿಯಲ್ಲಿ ಕ್ರಮಕ್ಕೆ ಮುಂದಾಗಿರುವ ಪಂಜಾಬ್-ಹರ್ಯಾಣ ಕೋರ್ಟ್ ದೀಪಾವಳಿ ಸಂದರ್ಭದಲ್ಲಿ ಸಂಜೆ ವೇಳೆ ಮಾತ್ರ ಪಟಾಕಿ ಸಿಡಿಸಲು ಅನುಮತಿ ನೀಡುವುದಾಗಿ ಹೇಳಿದೆ.
ವಾಯು ಮಾಲೀನ್ಯ ತಡೆಗೆ ಕಠಿಣ ಕ್ರಮ ಅವಶ್ಯಕ ಎಂದು ಹೇಳಿರುವ ಕೋರ್ಟ್, ಪಂಜಾಬ್ ಮತ್ತು ಹರ್ಯಾಣ ರಾಜ್ಯಗಳಲ್ಲಿ ಸಂಜೆ 6.30ರಿಂದ ರಾತ್ರಿ 9.30ವರೆಗೂ ಮಾತ್ರ ಪಟಾಕಿ ಬಳಕೆಗೆ ಅವಕಾಶ ನೀಡಿದೆ. ಅಲ್ಲದೆ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದು, ನಿಯಮ ಪಾಲನೆ ಕುರಿತು ಪೊಲೀಸರು ಕಣ್ಗಾವಲು ಇಡುವಂತೆ ಹೇಳಿದೆ.
ಪೊಲೀಸರು ತಮ್ಮ ಪಿಸಿಆರ್ ವಾಹನಗಳ ಮೂಲಕ ಸಂಚರಿಸಿ ಬೆಳಗ್ಗೆ ಸಮಯದಲ್ಲಿ ಪಟಾಕಿ ಬಳಕೆಗೆ ಅವಕಾಶ ನೀಡಬಾರದು ಎಂದು ಹೇಳಿದೆ. ಇತ್ತೀಚೆಗಷ್ಟೇ ದೆಹಲಿ ಹೈಕೋರ್ಟ್ ವಾಯು ಮಾಲೀನತಡೆಗಾಗಿ ದೆಹಲಿಯಲ್ಲಿ ಪಟಾಕಿ ಮಾರಾಟ ಮತ್ತು ಪಟಾಕಿ ಬಳಕೆ ಮೇಲೆ ನಿಷೇಧ ಹೇರಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


