ಆರುಷಿ ಕೇಸ್ ನಲ್ಲಿ ತಲ್ವಾರ್ ದಂಪತಿ ಖುಲಾಸೆ: ಹಾಗಿದ್ದರೇ ಕೊಂದವರ್ಯಾರು, ಟ್ವಿಟ್ಟರಿಗರ ಪ್ರಶ್ನೆ?
ಶದಾದ್ಯಂತ ಸಂಚಲನ ಸೃಷ್ಟಿಸಿದ್ದ 2008 ರಲ್ಲಿ ನೊಯಿಡಾದಲ್ಲಿ ನಡೆದಿದ್ದ ಆರುಷಿ–ಹೇಮರಾಜ್ ಕೊಲೆ ಪ್ರಕರಣದಲ್ಲಿ ಆರುಷಿ ಪೋಷಕರಾದ ರಾಜೇಶ್ ತಲ್ವಾರ್ ...

Published On :
ನವದೆಹಲಿ: ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದ 2008 ರಲ್ಲಿ ನೊಯಿಡಾದಲ್ಲಿ ನಡೆದಿದ್ದ ಆರುಷಿ–ಹೇಮರಾಜ್ ಕೊಲೆ ಪ್ರಕರಣದಲ್ಲಿ ಆರುಷಿ ಪೋಷಕರಾದ ರಾಜೇಶ್ ತಲ್ವಾರ್ ಮತ್ತು ನೂಪುರ್ ತಲ್ವಾರ್ ಅವರನ್ನು ಅಲಹಾಬಾದ್ ಹೈಕೋರ್ಟ್ ಗುರುವಾರ ಖುಲಾಸೆಗೊಳಿಸಿದೆ. ಇದರ ಬೆನ್ನಲ್ಲೇ ಹಲವು ಪ್ರಶ್ನೆಗಳು ಎದ್ದಿವೆ.
ತಲ್ವಾರ್ ದಂಪತಿ ನಿರಪರಾಧಿಗಳು ಎಂದಾದರೇ ಆರುಷಿ ಮತ್ತು ಹೇಮರಾಜ್ ಅವರನ್ನು ಕೊಂದಿದ್ದು ಯಾರು ಎಂದು ಟ್ಟಿಟ್ಟರ್ ನಲ್ಲಿ ಹಲವರು ಪ್ರಶ್ನಿಸಿದ್ದಾರೆ.
ಆರುಷಿ ಕೊಂದವರು ಯಾರು ಎಂಬುದು ಗೊತ್ತಾಗಲಿಲ್ಲ, ಬಹುಶಃ ಗೊತ್ತಾಗುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಟ್ಟೀಟ್ ಮಾಡಿದ್ದಾರೆ.
ಕೇವಲ ಅನುಮಾನದ ಆಧಾರದಲ್ಲಿ ಆರೋಪಿಗಳನ್ನು ಅಪರಾಧಿಗಳು ಎಂದು ಘೋಷಿಸಲು ಸಾಧ್ಯವಿಲ್ಲ.ಆರುಷಿ ಪೋಷಕರ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳು ಇಲ್ಲ ಮತ್ತು ಲಭ್ಯವಿರುವ ಸಾಂದರ್ಭಿಕ ಸಾಕ್ಷ್ಯಗಳು ಆರೋಪವನ್ನು ಸಾಬೀತು ಮಾಡುವಲ್ಲಿ ವಿಫಲವಾಗಿವೆ ಎಂದು ಹೇಳಿರುವ ನ್ಯಾಯ ಪೀಠದ ಆದೇಶವನ್ನು ಕಬೀರ್ ಬೇಡಿ ಪ್ರಶಂಸಿದ್ದಾರೆ.
ACQUITTED!!! Rajesh and Nupur Talwar not guilty of #Aarushi's murder. Finally, justice prevails, nightmare ends.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Twitterಟ್ವಿಟ್ಟರ್Allahabad High Courtಅಲಹಾಬಾದ್ ಹೈಕೋರ್ಟ್acquittedಖುಲಾಸೆAarushi Murder Caseಆರುಷಿ ಕೊಲೆ ಪ್ರಕರಣTalwar coupleತಲ್ವಾರ್ ದಂಪತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


