ದೇಶ

ಪನ್ನೀರ್ ಸೆಲ್ವಂ ಸೇರಿ 12 ಶಾಸಕರ ಅನರ್ಹಗೊಳಿಸುವಂತೆ ಕೋರಿ 'ಹೈ' ಮೆಟ್ಟಿಲೇರಿದ ದಿನಕರನ್

ತಮಿಳುನಾಡು ಉಪ ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಸೇರಿದಂತೆ ಆಡಳಿತರೂಢ ಎಐಎಡಿಎಂಕೆಯ 12 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ....

ಪನ್ನೀರ್ ಸೆಲ್ವಂ ಸೇರಿ 12 ಶಾಸಕರ ಅನರ್ಹಗೊಳಿಸುವಂತೆ ಕೋರಿ 'ಹೈ' ಮೆಟ್ಟಿಲೇರಿದ ದಿನಕರನ್
ಟಿಟಿವಿ ದಿನಕರನ್
Published On :
ಚೆನ್ನೈ: ತಮಿಳುನಾಡು ಉಪ ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಸೇರಿದಂತೆ ಆಡಳಿತರೂಢ ಎಐಎಡಿಎಂಕೆಯ 12 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಎಐಎಡಿಎಂಕೆ ಬಂಡಾಯ ನಾಯಕ ಟಿಟಿವಿ ದಿನಕರನ್ ಅವರು ಶುಕ್ರವಾರ ಮದ್ರಾಸ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಕಳೆದ ಫೆಬ್ರವರಿಯಲ್ಲಿ ನಡೆದ ವಿಶ್ವಾಸಮತದ ವೇಳೆ ಸರ್ಕಾರದ ವಿರುದ್ಧ ಮತ ಹಾಕಿದ ಒ ಪನ್ನೀರ್ ಸೆಲ್ವಂ ಹಾಗೂ ಅವರ ಬೆಂಬಲಿಗ 11 ಶಾಸಕರನ್ನು ಅನರ್ಹಗೊಳಿಸುವಂತೆ ದಿನಕರನ್ ಕೋರ್ಟ್ ಗೆ ಮನವಿ ಮಾಡಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ಈಗಾಗಲೇ ಸ್ಪೀಕರ್ ಧನಪಾಲ್ ಅವರು ಟಿಟಿವಿ ದಿನಕರನ್ ಬೆಂಬಲಿತ 18 ಶಾಸಕರನ್ನು ಅನರ್ಹಗೊಳಿಸಿದ್ದು, ಅದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.