ರಾಹುಲ್ ಗಾಂಧಿ ಪ್ರಚಾರ ಮಾಡಿದಲ್ಲಿ ಕಾಂಗ್ರೆಸ್ ಸೋಲು ಖಚಿತ: ಯೋಗಿ ಆದಿತ್ಯನಾಥ್
"ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಎಲ್ಲಿ ತನ್ನ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಾರೆಯೋ ಅಲ್ಲಿ ಕಾಂಗ್ರೆಸ್ ಸೋಲು ಖಚಿತ" .

Published On :
ವಲ್ಸದ್ : "ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಎಲ್ಲಿ ತನ್ನ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಾರೆಯೋ ಅಲ್ಲಿ ಕಾಂಗ್ರೆಸ್ ಸೋಲು ಖಚಿತ" ಹೀಗೆಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡರು.
ಗುಜರಾತಿನ ರ್ಯಾಲಿ ಒಂದರಲ್ಲಿ ಭಾಗವಹಿಸಿದ್ದ ಆದಿತ್ಯನಾಥ್, "ಅಮಿತ್ ಶಾ ಗುಜರಾತಿಗೆ ಬಂದಾಗ ಇಟಲಿಗೆ ಹಾರುವ ರಾಹುಲ್ ಗಾಂಧಿ, ಈಗೇಕೆ ಗುಜರಾತಿಗೆ ಬಂದಿದ್ದಾರೆ?" ಎಂದು ಅವರು ಪ್ರಶ್ನಿಸಿದರು.
"ತನ್ನ ಕ್ಷೇತ್ರ ಅಮೆಥಿಯಲ್ಲಿ ಯಾವುದೇ ಅಭುವರದ್ಧಿ ಕಾರ್ಯ ನಡೆಸದ ರಾಹುಲ್ ರಿಂದ ಗುಜರಾತಿನಲ್ಲಿ ಬದಲಾವಣೆಯನ್ನು ನಿರೀಕ್ಷಿಸಬಹುದೆ? ರಾಹುಲ್ ಗಾಂಧಿ ಎಲ್ಲೆಲ್ಲಿ ಪ್ರಚಾರಕ್ಕೆ ಹೋಗುತ್ತಾರೋ ಅಲ್ಲೆಲ್ಲ ಕಾಂಗ್ರೆಸ್ ಸೋತಿದೆ. ಈ ಬಾರಿಯೂ ಅದೇ ಮರುಕಳಿಸಲಿದೆ" ಎಂದೆನ್ನುವ ಮೂಲಕ ಸಧ್ಯದಲ್ಲೇ ನಡೆಯುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿಯೂ ಬಿಜೆಪಿ ವಿಜಯ್ ಯಾತ್ರೆ ಮುಂದುವರಿಯುವುದೆಂದು ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Gujaratಗುಜರಾತ್Uttar pradeshಉತ್ತರ ಪ್ರದೇಶRahul Gandhiರಾಹುಲ್ ಗಾಂಧಿಅಮೇಥಿYogi Adityanathಯೋಗಿ ಆದಿತ್ಯನಾಥ್AmethiBJP rallyಬಿಜೆಪಿ ರ್ಯಾಲಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


