ಪುಲ್ವಾಮದಲ್ಲಿ ಸೇನಾಪಡೆಗಳ ಎನ್ ಕೌಂಟರ್: ಪ್ರಮುಖ ಲಷ್ಕರ್ ಕಮಾಂಡರ್ ಗಳ ಹತ್ಯೆ
ಉಗ್ರರ ವಿರುದ್ಧದ ಭಾರತೀಯ ಸೇನೆಯ ಕಾರ್ಯಾಚರಣೆ ಮುಂದುವರೆದಿದ್ದು, ಶನಿವಾರ ಮುಂಜಾನೆ ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಲಷ್ಕರ್ ಕಮಾಂಡರ್ ಗಳನ್ನು ಹೊಡೆದುರುಳಿಸಿದ್ದಾರೆ.

Published On :
ಶ್ರೀನಗರ: ಉಗ್ರರ ವಿರುದ್ಧದ ಭಾರತೀಯ ಸೇನೆಯ ಕಾರ್ಯಾಚರಣೆ ಮುಂದುವರೆದಿದ್ದು, ಶನಿವಾರ ಮುಂಜಾನೆ ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಲಷ್ಕರ್ ಕಮಾಂಡರ್ ಗಳನ್ನು ಹೊಡೆದುರುಳಿಸಿದ್ದಾರೆ.
ಉಗ್ರರು ಅವಿತಿರುವ ಕುರಿತು ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಕೂಡಲೇ ಪುಲ್ವಾಮದ ಲಿಟ್ಟರ್ ಪ್ರಾಂತ್ಯವನ್ನು ಸುತ್ತುವರೆದಿದ್ದಾರೆ. ಸೇನಾಪಡೆಗಳನ್ನು ಕಂಡ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಸೈನಿಕರು ಪ್ರತಿದಾಳಿ ನಡೆಸಿದ್ದಾರೆ. ಸುಮಾರು ಅರ್ಧ ಗಂಟೆಗೂ ಅಧಿಕ ಸಮಯ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಇಬ್ಬರು ಉಗ್ರರು ಸೈನಿಕರ ದಾಳಿಯಲ್ಲಿ ಹತರಾಗಿದ್ದಾರೆ.
ಮೃತ ಉಗ್ರರರನ್ನು ಕುಖ್ಯಾತ ಉಗ್ರ ಸಂಘಟನೆ ಲಷ್ಕರ್ ಇ ತೊಯ್ಬಾದ ಪ್ರಮುಖ ಕಮಾಂಡರ್ ಗಳಾದ ವಸೀಂ ಶಾ ಮತ್ತು ನಿಸಾರ್ ಅಹ್ಮದ್ ಮಿರ್ ಎಂದು ಗುರುತಿಸಲಾಗಿದೆ. ಇಬ್ಬರೂ ಲಷ್ಕರ್ ಉಗ್ರ ಸಂಘಟನೆಯ ಪ್ರಮುಖ ಕಮಾಂಡರ್ ಗಳಾಗಿದ್ದು, ಯುವಕರಿಗೆ ಉಗ್ರ ತರಬೇತಿ ಮತ್ತು ವಿಧ್ವಂಸಕ ಕೃತ್ಯಗಳ ಯೋಜನೆ ರೂಪಿಸುತ್ತಿದ್ದರು ಎಂದು ತಿಳಿದುಬಂದಿದೆ.
ಪ್ರಸ್ತುತ ಘಟನಾ ಪ್ರದೇಶದಲ್ಲಿ ಸೇನೆ ಶೋಧ ಕಾರ್ಯ ಆರಂಭಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಶ್ರೀನಗರSrinagarಜಮ್ಮು ಮತ್ತು ಕಾಶ್ಮೀರJammu and KashmirPulwama encounterಪುಲ್ವಾಮಾ ಎನ್ ಕೌಂಟರ್Lashkar-e-Tayibaಭಾರತೀ ಸೇನೆಲಷ್ಕರ್ ಇ ತೊಯ್ಬಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


