ಅಯೋಧ್ಯೆಯಲ್ಲಿ ಮೆಗಾ ದೀಪಾವಳಿ 2017 ಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಯೋಜನೆ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಈ ವರ್ಷ ದೀಪಾವಳಿಯನ್ನು ಅಯೋಧ್ಯೆಯಲ್ಲಿ ಆಚರಣೆ ಮಾಡಲಿದ್ದಾರೆ.

Published On :
ಲಖನೌ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಈ ವರ್ಷ ದೀಪಾವಳಿಯನ್ನು ಅಯೋಧ್ಯೆಯಲ್ಲಿ ಆಚರಣೆ ಮಾಡಲಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ಅಯೋಧ್ಯೆಯಲ್ಲಿ ದೀಪಾವಳಿ ಆಚರಣೆ ಮಾಡಿರುವುದಕ್ಕೂ ರಾಮಜನ್ಮಭೂಮಿ ವಿವಾದಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಸಿಎಂ ಯೋಗಿ ಆದಿತ್ಯನಾಥ್ ತಮ್ಮ ಬೆಂಬಲಿಗರೊಂದಿಗೆ ಅಯೋಧ್ಯೆಯಲ್ಲಿ ದೀಪಾವಳಿ ಆಚರಣೆ ಮಾಡಲಿದ್ದು, ಸಿದ್ಧತೆ ಭರದಿಂದ ಸಾಗಿದೆ. 2 ಲಕ್ಷ ದೀಪಗಳನ್ನು ಬೆಳಗುವ ಮೂಲಕ ದೀಪಾವಳಿ ಆಚರಣೆಯಲ್ಲಿ ಗಿನ್ನೀಸ್ ವಿಶ್ವ ದಾಖಲೆ ನಿರ್ಮಿಸಲು ಉದ್ದೇಶಿಸಲಾಗಿದೆ. ರಾಮಾಯಣಕ್ಕೆ 10,000 ವರ್ಷಗಳ ಇತಿಹಾಸವಿದ್ದು ಅಯೋಧ್ಯೆ ರಾಮಾಯಣದ ಅವಿಭಾಜ್ಯ ಅಂಗ, ಅಯೋಧ್ಯೆ ನಮ್ಮ ಸಂಸ್ಕೃತಿಯ ಹೆಮ್ಮೆ, ರಾಮ ನಮಗೆ ಆದರ್ಶ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


