ದೇಶದ ಹೆಸರು ಬದಲಿಸುವ ಬಿಜೆಪಿ ಯತ್ನ ಬಹಳ ದೂರವೇನಿಲ್ಲ; ಮಮತಾ ಬ್ಯಾನರ್ಜಿ
ಭಾರತ ದೇಶದ ಹೆಸರು ಬದಲಿಸುವ ಬಿಜೆಪಿ ಯತ್ನಗಳು ಬಹಳ ದೂರವೇನಿಲ್ಲ. ಮುಂದಿನ ದಿನಗಳಲ್ಲಿ ದೇಶದ ಹೆಸರನ್ನು ಬದಲಿಸಿದರೂ ಅಚ್ಚರಿಯಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ವ್ಯಂಗ್ಯವಾಡಿದ್ದಾರೆ...

Published On :
ಕೋಲ್ಕತಾ; ಭಾರತ ದೇಶದ ಹೆಸರು ಬದಲಿಸುವ ಬಿಜೆಪಿ ಯತ್ನಗಳು ಬಹಳ ದೂರವೇನಿಲ್ಲ. ಮುಂದಿನ ದಿನಗಳಲ್ಲಿ ದೇಶದ ಹೆಸರನ್ನು ಬದಲಿಸಿದರೂ ಅಚ್ಚರಿಯಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ವ್ಯಂಗ್ಯವಾಡಿದ್ದಾರೆ.
ತಾಜ್ ಮಹಲ್ ಕುರಿತಂತೆ ಬಿಜೆಪಿ ನಾಯಕ ಸಂಗೀತ್ ಸೋಮ್ ಅವರು ನೀಡಿದ್ದ ವಿವಾದಾತ್ಮಕ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿ ನಾಯಕ ಕುರಿತಂತೆ ಕಡಿಮೆ ಮಾತನಾಡಿದರೆಯೇ ಉತ್ತಮ. ಬಿಜೆಪಿ ನಾಯಕರ ಇಂತಹ ಹೇಳಿಕೆ ಕುರಿತಂತೆ ಮಾತನಾಡುವುದಕ್ಕೆ ನನಗೆ ನಾಚಿಕೆಯಾಗುತ್ತದೆ. ಬಿಜೆಪಿ ನಾಯಕರು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿಲ್ಲ. ಬದಲಾಗಿ ತಮ್ಮ ರಾಜಕೀಯ ಅಜೆಂಡಾಗಳಿಗಾಗಿ ಜನರನ್ನು ಒಡೆಯುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇಂತಹ ಒಡಕು ಜನರನ್ನು ನಾವು ನಂಬುವುದಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಪ್ರಜಾಪ್ರಭುತ್ವದಂತೆ ನಡೆಯುತ್ತಿಲ್ಲ. ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ. ದೇಶದ ಹೆಸರನ್ನು ಬದಲಿರುವ ಬಿಜೆಪಿ ಯತ್ನಗಳು ಬಹಳ ದೂರವೇನೂ ಇಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿ ದೇಶದ ಹೆಸರನ್ನು ಬದಲಿಸಿದರೂ ಅದರಲ್ಲಿ ಅಚ್ಚರಿಯೇನಿಲ್ಲ. ಭಾರತದ ಬಹುಸಂಖ್ಯೆಯುಳ್ಳ ಜನಾಂಗ, ಜಾತಿ, ಮತ ಮತ್ತು ಧರ್ಮಗಳನ್ನು ಹೊಂದಿರುವ ದೊಡ್ಡ ದೇಶವಾಗಿದೆ.
ದೇಶದ ಐಕ್ಯತೆ ಹಾಗೂ ಸಮಗ್ರತೆಗೆ ಧಕ್ಕೆಯುಂಟಾಗುವಂತಹ ಹೇಳಿಕೆಗಳನ್ನು ನಾವು ನೀಡಬಾರದು. ಭಾರತದ ಸಂಸ್ಕೃತಿ, ಪರಂಪರೆಯನ್ನು ನಾಶ ಮಾಡುವುದೇ ಬಿಜೆಪಿ ಮುಖ್ಯ ಅಜೆಂಡಾ. ಭಾರತದ ಭವ್ಯ ಪರಂಪರೆಯನ್ನು ನಾಶ ಮಾಡುವ ಬಿಜೆಪಿಯ ವ್ಯವಸ್ಥಿತ ಹುನ್ನಾರವಿದು. ಒಂದು ಕಟ್ಟಡವನ್ನು ಹಿಂದುಗಳು, ಮುಸ್ಲಿಮರು, ಕ್ರಿಶ್ಚಿಯನ್ನರು ಕಟ್ಟಿದ್ದು ಎಂದು ಅವರು ಹೇಗೆ ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


