ಸುನಂದಾ ಪುಷ್ಕರ್ ಸಾವನ್ನಪ್ಪಿದ್ದ ಸ್ಟಾರ್ ಹೋಟೆಲ್ ಕೋಣೆ ಬೀಗ ತೆರವು
ಕಾಂಗ್ರೆಸ್ ಮುಖಂಡ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ 2014ರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದ ಪಂಚತಾರಾ ಲೀಲಾ ಪ್ಯಾಲೆಸ್ ಹೋಟೆಲ್ ಕೋಣೆಯನ್ನು ದೆಹಲಿಯ ನ್ಯಾಯಾಲಯವೊಂದು ಸೋಮವಾರ ಬೀಗ...

Published On :
ನವದೆಹಲಿ: ಕಾಂಗ್ರೆಸ್ ಮುಖಂಡ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ 2014ರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದ ಪಂಚತಾರಾ ಲೀಲಾ ಪ್ಯಾಲೆಸ್ ಹೋಟೆಲ್ ಕೋಣೆಯನ್ನು ದೆಹಲಿಯ ನ್ಯಾಯಾಲಯವೊಂದು ಸೋಮವಾರ ಬೀಗ ಮುದ್ರೆಯಿಂದ ತೆರವುಗೊಳಿಸಿದೆ.
ಸುನಂದಾ ಸಾವಿನ ತನಿಖೆಗಾಗಿ ಅಂದಿನಿಂದ ಹೋಟೆಲ್ ರೂಮ್ ದೆಹಲಿ ಪೊಲೀಸರ ವಶದಲ್ಲಿತ್ತು. ಆದರೆ, ಅನೇಕ ದಿನಗಳಿಂದ ರೂಮ್ ಬೀಗ ಹಾಕಿದ್ದು, ಇದರಿಂದ ರೂಮ್ ಧೂಳು ಹಿಡಿದು ಹಾಳಾಗಿತ್ತು. ಹೀಗಾಗಿ ರೂಮ್ ತೆರೆಯಬೇಕೆಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್'ಗೆ ಹೋಟೆಲ್ ನ ಆಡಳಿತ ಮಂಡಳಿಯವರು ಮೊರೆ ಹೋಗಿದ್ದರು.
ಇದರಂತೆ ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾಯಾಲಯ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯನ್ನು ಸಲ್ಲಿಸಿದ ಹಿನ್ನಲೆಯಲ್ಲಿ ಹೋಟೆಲ್'ನ ಕೋಣೆ ಬೀಗ ಮುದ್ರೆ ಹಾಕಿದ್ದನ್ನು 6 ದಿನಗಳ ಒಳಗಾಗಿ ತೆಗೆಯುವಂತೆ ಪೊಲೀಸರಿಗೆ ಅ.10 ರಂದು ಸೂಚಿಸಿತ್ತು.
ನ್ಯಾಯಾಲಯದ ಆದೇಶದಂತೆಯೇ ಪೊಲೀಸರು ಹೋಟೆಲ್ ರೂಮ್' ಬೀಗವನ್ನು ತೆರೆದಿರುವುದಾಗಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.
ಸುನಂದಾ 2014ರ ಜ.17ರ ರಾತ್ರಿ ಸಾವನ್ನಪ್ಪಿದ್ದರು. ಬಳಿಕ ತನಿಖೆ ಕಾರಣ ಕೋಣೆಗೆ ಬೀಗ ಹಾಕಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


