ದೇಶ

ಜಯ್ ಶಾ ಅವ್ಯವಹಾರ ಪ್ರಕರಣದಿಂದ ಜನರ ಗಮನ ಬೇರೆಡೆ ಸೆಳೆಯಲು ರಾಬರ್ಟ್ ವಾದ್ರಾ ವಿರುದ್ದ ಬಿಜೆಪಿ ಆರೋಪ: ಕಾಂಗ್ರೆಸ್

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಪುತ್ರ ಜಯ್ ಶಾ ಕಂಪನಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಯತ್ನ ನಡೆಸುತ್ತಿರುವ ಬಿಜೆಪಿ ರಾಬರ್ಟ್ ವಾದ್ರಾ ವಿರುದ್ಧ ಆರೋಪಗಳನ್ನು ಮಾಡುತ್ತಿದೆ...

ಜಯ್ ಶಾ ಅವ್ಯವಹಾರ ಪ್ರಕರಣದಿಂದ ಜನರ ಗಮನ ಬೇರೆಡೆ ಸೆಳೆಯಲು ರಾಬರ್ಟ್ ವಾದ್ರಾ ವಿರುದ್ದ ಬಿಜೆಪಿ ಆರೋಪ: ಕಾಂಗ್ರೆಸ್
ರಾಬರ್ಟ್ ವಾದ್ರಾ
Published On :
ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಪುತ್ರ ಜಯ್ ಶಾ ಕಂಪನಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಯತ್ನ ನಡೆಸುತ್ತಿರುವ ಬಿಜೆಪಿ ರಾಬರ್ಟ್ ವಾದ್ರಾ ವಿರುದ್ಧ ಆರೋಪಗಳನ್ನು ಮಾಡುತ್ತಿದೆ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ. 
ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ವಕ್ತಾರ ಸಂಜಯ್ ಝಾ ಅವರು, ರಾಜಕೀಯ ಪ್ರೇರಿತ ಯತ್ನಗಳನ್ನು ಬಿಜೆಪಿ ಮಾಡುತ್ತಿದೆ. ಅಮಿತ್ ಶಾ ಪುತ್ರ ಶಾ ವಿರುದ್ಧ ಭ್ರಷ್ಚಾಚಾರ ಆರೋಪಗಳು ಕೇಳಿಬಂದಿದ್ದು, ಪ್ರಕರಣ ಸಂಬಂಧ ದೇಶದ ಜನತೆಯ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ಈ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ. 
ಮಾಧ್ಯಮಗಳ ಸ್ವತಂತ್ರವೆಂಬ ಕುತ್ತಿಗೆ ಹಿಸುಕುವ ಪ್ರಯತ್ನಗಳನ್ನು ಬಿಜೆಪಿ ಮಾಡುತ್ತಿದೆ. ಬಿಜೆಪಿಗೆ ಭಯವಿದ್ದು, ಹೀಗಾಗಿಯೇ ಪ್ರಕರಣ ತನಿಖೆಗೆ ಅವಕಾಶಗಳನ್ನು ನೀಡುತ್ತಿಲ್ಲ. ಈ ಪ್ರಕರಣವನ್ನು ಕಾಂಗ್ರೆಸ್ ಸುಮ್ಮನೆ ಬಿಡುವುದಿಲ್ಲ. ಬೀದಿಗಿಳಿದು ಪ್ರತಿಭಟನೆ ನಡೆಸುತ್ತೇವೆ. ಗಾಗಲೇ ಅಮಿತ್ ಶಾ ಪುತ್ರನ ಭ್ರಷ್ಟಾಚಾರದ ವಿರುದ್ಧ ದೇಶಾದಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ. 
ತಲೆಮರೆಸಿಕೊಂಡಿರುವ ಶಸ್ತ್ರಾಸ್ತ್ರ ದಲ್ಲಾಳಿ ಸಂಜಯ್ ಭಂಡಾರಿ ಜೊತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ನಂಟು ಹೊಂದಿದ್ದಾರೆಂದು ಈ ಹಿಂದೆ ರಾಷ್ಟ್ರೀಯ ಸುದ್ದಿ ವಾಹಿನಿಯೊಂದು ಬಹಿರಂಗಪಡಿಸಿತ್ತು. 
ರಾಬರ್ಟ್ ವಾದ್ರಾ ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದ ಬಿಜೆಪಿ, ಶಸ್ತ್ರಾಸ್ತ್ರ ದಲ್ಲಾಳಿಯ ಜೊತೆ ರಾಬರ್ಟ್ ವಾದ್ರಾ ನಂಟು ಹೊಂದಿರುವ ಬಗ್ಗೆ ಸಿದ್ದು ಪ್ರಸಾರವಾದರೂ ಕಾಂಗ್ರೆಸ್ ಮೌನವಾಗಿರುವುದನ್ನು ಪ್ರಶ್ನಿಸಿತ್ತು. ಅಲ್ಲದೆ, ಆರೋಪಗಳ ಕುರಿತಂತೆ ಸ್ಪಷ್ಟನೆ ನೀಡುವಂತೆ ಆಗ್ರಹಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.