ಭಗವಾನ್ ರಾಮ ಬಿಜೆಪಿಯನ್ನು ಶಿಕ್ಷಿಸುತ್ತಾನೆ: ಲಾಲು ಪ್ರಸಾದ್
ಭಗವಾನ್ ಶ್ರೀರಾಮನ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದು, ಭಗವಾನ್ ರಾಮನೇ ಬಿಜೆಪಿಯನ್ನು ಶಿಕ್ಷಿಸುತ್ತಾನೆ ಎಂದು ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.

Published On :
ಪಾಟ್ನಾ: ಭಗವಾನ್ ಶ್ರೀರಾಮನ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದು, ಭಗವಾನ್ ರಾಮನೇ ಬಿಜೆಪಿಯನ್ನು ಶಿಕ್ಷಿಸುತ್ತಾನೆ ಎಂದು ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.
ರಾಮನ ಹೆಸರಿನಲ್ಲಿ ರಾಜಕೀಯ ಮಾಡುವುದು ತಪ್ಪು ಹಾಗೂ ನೈತಿಕತೆಗೆ ವಿರುದ್ಧವಾದದ್ದು ಎಂದು ದೀಪಾವಳಿ ಸಂದರ್ಭದಲ್ಲಿ ಲಾಲು ಪ್ರಸಾದ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಇದೇ ವೇಳೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ರಾಮನ ಹೆಸರಿನಲ್ಲಿ ರಾಜಕೀಯ ನಾಟಕವಾಡುತ್ತಿದ್ದಾರೆ ಎಂದು ಲಾಲು ಪ್ರಸಾದ್ ಯಾದವ್ ಆರೋಪಿಸಿದ್ದು, ಪ್ರತಿಯೊಬ್ಬರಿಗೂ ತಮ್ಮ ಧರ್ಮ, ಸಂಪ್ರದಾಯಗಳನ್ನು ಪೂಜೆಗಳನ್ನು ಪಾಲಿಸಲು ಮುಕ್ತ ಅವಕಾಶವಿದೆ. ಆದರೆ ಬಿಜೆಪಿ ನಾಯಕರು, ಅದರಲ್ಲಿಯೂ ಪ್ರಮುಖವಾಗಿ ಯೋಗಿ ಆದಿತ್ಯನಾಥ್ ರಾಜಕೀಯ ನಾಟಕವಾಡುತ್ತಿದ್ದಾರೆ, ಜನತೆ ಅವರ ನಾಟಕವನ್ನು ಅರ್ಥಮಾಡಿಕೊಳ್ಳುತ್ತಾರೆ" ಎಂದಿದ್ದಾರೆ.
ನೋಟು ನಿಷೇಧಗೊಳಿಸಿ ಜನರ ಜೀವನವನ್ನು ಸಂಕಷ್ಟಕ್ಕೆ ತಳ್ಳಿದ್ದರಿಂದ, ರಾಮನ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವವರನ್ನು, ಆರ್ ಎಸ್ಎಸ್ ಹಾಗೂ ಬಿಜೆಪಿಯನ್ನು ರಾಮನೇ ಶಿಕ್ಷಿಸುತ್ತಾನೆ, ಇದು ಶತಸಿದ್ಧ ಏಕೆಂದರೆ ರಾಮ ಭಾರತೀಯರ ಹೃದಯದಲ್ಲಿ ನೆಲೆಸಿದ್ದಾನೆ ಎಂದು ಲಾಲು ಪ್ರಸಾದ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


