ಆಧಾರ್ ಇಲ್ಲವೆಂಬ ಕಾರಣಕ್ಕೇ ಪಡಿತರ ನಿರಾಕರಣೆ ಮಾಡುವಂತಿಲ್ಲ: ಯುಐಡಿಎಐ ಎಚ್ಚರಿಕೆ
ಆಧಾರ್ ಇಲ್ಲವೆಂಬ ಒಂದೇ ಕಾರಣಕ್ಕೆ ಯಾವುದೇ ಕುಟುಂಬಕ್ಕೆ ಪಡಿತರ ನಿರಾಕರಣೆ ಮಾಡುವಂತಿಲ್ಲ ಎಂದು ವಿಶಿಷ್ಟ ಗುರುತು ಪ್ರಾಧಿಕಾರ ಸಂಸ್ಥೆ ಯುಐಡಿಎಐ ಎಚ್ಚರಿಕೆ ನೀಡಿದೆ.

Published On :
ನವದೆಹಲಿ: ಆಧಾರ್ ಇಲ್ಲವೆಂಬ ಒಂದೇ ಕಾರಣಕ್ಕೆ ಯಾವುದೇ ಕುಟುಂಬಕ್ಕೆ ಪಡಿತರ ನಿರಾಕರಣೆ ಮಾಡುವಂತಿಲ್ಲ ಎಂದು ವಿಶಿಷ್ಟ ಗುರುತು ಪ್ರಾಧಿಕಾರ ಸಂಸ್ಥೆ ಯುಐಡಿಎಐ ಎಚ್ಚರಿಕೆ ನೀಡಿದೆ.
ಇತ್ತೀಚೆಗೆ ಜಾರ್ಖಂಡ್ ನಲ್ಲಿ ನಡೆದ ಬಾಲಕಿ ಸಾವು ಪ್ರಕರಣದ ಹಿನ್ನಲೆಯಲ್ಲಿ ಮಾತನಾಡಿದ ಯುಐಡಿಎಐ ಮುಖ್ಯಸ್ಥ ಅಜಯ್ ಭೂಷಣ್ ಪಾಂಡೆ ಅವರು, ಆಧಾರ್ ಇಲ್ಲವೆಂಬ ಒಂದೇ ಕಾರಣಕ್ಕೆ ಯಾವುದೇ ಅರ್ಹ ಕುಟುಂಬಕ್ಕೆ ಪಡಿತರ ಸಾಮಗ್ರಿ ನಿರಾಕರಿಸುವಂತಿಲ್ಲ ಎಂದು ಹೇಳಿದ್ದಾರೆ.
"ಆಧಾರ್ ನಂಬರ್ ಪಡೆಯುವವರೆಗೆ ಪಡಿತರ ಸೇರಿದಂತೆ ಯೋಜನೆಗಳ ಲಾಭ ಪಡೆಯಲು ಇತರ ಗುರುತು ಪತ್ರ ಬಳಸಿಕೊಳ್ಳಲು ಅವಕಾಶವಿದೆ. ಬಾಲಕಿಯ ಸಾವಿಗೆ ಸಂಬಂಧಿಸಿದಂತೆ ಜಾರ್ಖಂಡ್ ಸರಕಾರ ತನಿಖೆಗೆ ಆದೇಶಿಸಿದ್ದು, ತಪ್ಪಿತಸ್ಥರ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಮುಂದೆ ಇಂತಹ ತಪ್ಪುಗಳು ನಡೆಯದಂತೆ ಸರ್ಕಾರ ನೋಡಿಕೊಳ್ಳಲಿದೆ ಎಂದು ಪಾಂಡೆ ಹೇಳಿದರು. ಇದೇ ವೇಳೆ ಜಾರ್ಖಂಡ್ ನ ಸಂತ್ರಸ್ಥ ಬಾಲಕಿ ಕುಟುಂಬ 2013ರಲ್ಲೇ ಆಧಾರ್ ನಂಬರ್ ಪಡೆದಿದೆ ಎಂದು ಹೇಳಿರುವ ಪಾಂಡೆ ಅವರು, ಆಧಾರ್ ಇದ್ದರೂ ಇದರ ಸೌಲಭ್ಯ ನೀಡಲು ನಿರಾಕರಿಸುವುದು ಅಪರಾಧವಾಗುತ್ತದೆ. ಈ ಬಗ್ಗೆ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ಹೇಳಿದರು.
ಜಾರ್ಖಂಡ್ ನಲ್ಲಿ ಇತ್ತೀಚೆಗೆ ಹನ್ನೊಂದು ವರ್ಷದ ಬಾಲಕಿಯೊಬ್ಬಳು ಹಸಿವಿನಿಂದ ಮೃತಪಟ್ಟ ಹಿನ್ನೆಲೆಯಲ್ಲಿ ವಿಶಿಷ್ಟ ಗುರುತು ಪ್ರಾಧಿಕಾರ ಈ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಆರು ಸದಸ್ಯರಿದ್ದ ಬಾಲಕಿಯ ಕುಟುಂಬಕ್ಕೆ ಆಧಾರ್ ಇಲ್ಲವೆಂದು ಪಡಿತರ ಸಾಮಗ್ರಿ ವಿತರಿಸಿರಲಿಲ್ಲ. ಈ ಕುಟುಂಬಕ್ಕೆ ಪಡಿತರ ನಿರಾಕರಿಸಿದವರ ವಿರುದ್ಧ ಕಠಿಣ ಕ್ರಮಕ್ಕೂ ಪ್ರಾಧಿಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


