ದೇಶ

ಸಿಎಂ ಯೋಗಿ ಅಯೋಧ್ಯೆಯಲ್ಲಿ ಶ್ರೀ ರಾಮನ ವಿಚಾರವನ್ನು ರಾಜಕೀಯ ಮಾಡುತ್ತಿದ್ದಾರೆ: ಎಸ್'ಪಿ ಸಂಸದ

ಅಯೋಧ್ಯೆಯಲ್ಲಿ ಶ್ರೀರಾಮನ ವಿಚಾರವನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜಕೀಯ ಮಾಡುತ್ತಿದ್ದಾರೆಂದು ಸಮಾಜವಾದಿ ಪಕ್ಷದ ಸಂಸದ ನರೇಶ್ ಅಗರ್ವಾಲ್...

ಸಿಎಂ ಯೋಗಿ ಅಯೋಧ್ಯೆಯಲ್ಲಿ ಶ್ರೀ ರಾಮನ ವಿಚಾರವನ್ನು ರಾಜಕೀಯ ಮಾಡುತ್ತಿದ್ದಾರೆ: ಎಸ್'ಪಿ ಸಂಸದ
ಸಮಾಜವಾದಿ ಪಕ್ಷದ ಸಂಸದ ನರೇಶ್ ಅಗರ್ವಾಲ್
Published On :
ಹರ್ದೋಯ್: ಅಯೋಧ್ಯೆಯಲ್ಲಿ ಶ್ರೀರಾಮನ ವಿಚಾರವನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜಕೀಯ ಮಾಡುತ್ತಿದ್ದಾರೆಂದು ಸಮಾಜವಾದಿ ಪಕ್ಷದ ಸಂಸದ ನರೇಶ್ ಅಗರ್ವಾಲ್ ಅವರು ಗುರುವಾರ ಹೇಳಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ಅಯೋಧ್ಯೆಯಲ್ಲಿ ಶ್ರೀರಾಮನ ವಿಚಾರವನ್ನು ರಾಜಕೀಯ ಮಾಡುತ್ತಿರುವುದನ್ನು ಇಡೀ ದೇಶವೇ ನೋಡುತ್ತಿದೆ. ರಾಮನ ಹೆಸರಿನಲ್ಲಿ ಉತ್ತರಪ್ರದೇಶ ಸರ್ಕಾರ ತನ್ನ ವೈಫಲ್ಯಗಳನ್ನು ಮರೆಮಾಚಿದರೆ, ಜನರು ಅದನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. 
ಯೋಗಿ ಅದಿತ್ಯನಾಥ್ ಅವರು ಅಧಿಕಾರಕ್ಕೆ ಬಂದ 7 ತಿಂಗಳಲ್ಲಿ 2 ತಿಂಗಳು ಗೋರಖ್ಪುರದಲ್ಲಿಯೇ ಇದ್ದರು. ಉತ್ತರಪ್ರದೇಶ ರಾಜ್ಯದ ಬಗ್ಗೆ ಅವರಿಗೆ ಎಷ್ಟು ಕಾಳಜಿ ಇದೆ ಎಂಬುದು ಇದರಲ್ಲಿಯೇ ತಿಳಿಯಬಹುದಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.