ದೇಶ

'ತಾಜ್ ಮಹಲ್' ಗೆ ಸಿಎಂ ಯೋಗಿ ಭೇಟಿ ಡ್ಯಾಮೇಜ್ ಕಂಟ್ರೋಲ್ ಗೆ ಸಹಕಾರಿ’

17 ನೇ ಶತಮಾನದ ವಿಶ್ವವಿಖ್ಯಾತ ತಾಜ್ ಮಹಲ್ ಕುರಿತಾದ ಇತ್ತೀಚಿನ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ತಾಜ್ ಮಹಲ್ ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ನೀಡುವುದಕ್ಕೆ ನಿರ್ಧರಿಸಿರುವುದು...

'ತಾಜ್ ಮಹಲ್' ಗೆ ಸಿಎಂ ಯೋಗಿ ಭೇಟಿ ಡ್ಯಾಮೇಜ್ ಕಂಟ್ರೋಲ್ ಗೆ ಸಹಕಾರಿ’
ಯೋಗಿ ಆದಿತ್ಯನಾಥ್
Published On :
ಆಗ್ರಾ: 17 ನೇ ಶತಮಾನದ ವಿಶ್ವವಿಖ್ಯಾತ ತಾಜ್ ಮಹಲ್ ಕುರಿತಾದ ಇತ್ತೀಚಿನ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ತಾಜ್ ಮಹಲ್ ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ನೀಡುವುದಕ್ಕೆ ನಿರ್ಧರಿಸಿರುವುದು ಡ್ಯಾಮೇಜ್ ಕಂಟ್ರೋಲ್ ಗೆ ಸಹಕಾರಿಯಾಗಲಿದೆ ಎಂದು ಉತ್ತರ ಪ್ರದೆಶ ಪ್ರವಾಸೋದ್ಯಮ ಕ್ಷೇತ್ರದ ಪ್ರಮುಖರು ಅಭಿಪ್ರಾಯಪಟ್ಟಿದ್ದಾರೆ. 
ಅ.26 ರಂದು ಯೋಗಿ ಆದಿತ್ಯನಾಥ್ ತಾಜ್ ಮಹಲ್ ಗೆ ಭೇಟಿ ನೀಡುವುದು ನಿಗದಿಯಾಗಿದ್ದು, ಬಿಜೆಪಿ ಶಾಸಕ ಸಂಗೀತ್ ಸೋಮ್ ಅವರ ವಿವಾದಾತ್ಮಕ ಹೇಳಿಕೆಯ ನಂತರ ಡ್ಯಾಮೇಜ್ ಕಂಟ್ರೋಲ್ ಗೆ ನೆರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 
ಪ್ರವಾಸಿಗರಿಗಾಗಿ ಇರುವ ಮಾರ್ಗದರ್ಶಕರ (ಗೈಡ್)ರು, ಟ್ರಾವೆಲ್ ಏಜೆನ್ಸಿಗಳು, ಹೋಟೆಲ್ ಗಳನ್ನು ಪ್ರತಿನಿಧಿಸುವ ಸಂಸ್ಥೆಗಳು ಆಗ್ರಾವನ್ನು ಗುರಿಯಾಗಿರಿಸಿಕೊಂಡು ನೀಡುವ ಹೇಳಿಕೆಗಳ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಇದೇ ವೇಳೆ ಮೊಘಲ್ ಇತಿಹಾಸಕಾರ ಪ್ರೊ. ಆರ್. ನಾಥ್ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದು ಗಾಸಿಪ್ ಗಳನ್ನಾಧರಿಸಿ ಇತಿಹಾಸವನ್ನು ತಿರುಚಬಾರದು ಎಂದು ಮನವಿ ಮಾಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.