ಘಾಜೀಪುರ್: ಆರ್ ಎಸ್ ಎಸ್ ಕಾರ್ಯಕರ್ತನ ಬರ್ಬರ ಹತ್ಯೆ
ಉತ್ತರ ಪ್ರದೇಸದ ಘಾಜೀಪುರ್ ದಲ್ಲಿ ಇಂದು ಬೆಳಗ್ಗೆ ಆರ್ ಎಸ್ ಎಸ್ ಕಾರ್ಯಕರ್ತರನ್ನು ಗುಂಡಿಕ್ಕಿ ಹತ್ಯೆ ಮಾದಲಾಗಿದೆ.

Published On :
ಘಾಜೀಪುರ್: ಉತ್ತರ ಪ್ರದೇಸದ ಘಾಜೀಪುರ್ ದಲ್ಲಿ ಇಂದು ಬೆಳಗ್ಗೆ ಆರ್ ಎಸ್ ಎಸ್ ಕಾರ್ಯಕರ್ತರನ್ನು ಗುಂಡಿಕ್ಕಿ ಹತ್ಯೆ ಮಾದಲಾಗಿದೆ.
ಆರ್ ಎಸ್ ಎಸ್ ಕಾರ್ಯಕರ್ತ, ಸ್ಥಳೀಯ ಪತ್ರಕರ್ತನಾಗಿದ್ದ ರಾಜೇಶ್ ಮಿಶ್ರಾ ಅವರ ಕಛೇರಿಯಲ್ಲೇ ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದಾರೆ. ರಾಜೇಶ್ ಕಚೇರಿಗೆ ನುಗ್ಗಿದ ದುಷ್ಕರ್ಮಿಗಳು ಒಂದೇ ಸಮನೆ ಗುಂಡಿನ ದಾಳಿ ನಡೆಸಿ ಅವರನ್ನು ಹತ್ಯೆ ಗೈದಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ರಾಜೇಶ್ ಸಹೋದರ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ.
ದಾಳಿ ನಡೆಸಿದ ದುಷ್ಕರ್ಮಿಗಳು ಪರಾರಿಯಾಗಿದ್ದು ರಾಜೇಶ್ ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂದ ಓದರನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ಹಿರಿಯ ಪೋಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಪರಾಧಿಗಳ ಪತ್ತೆಗೆ ವಿಶೇಷ ತಂದ ರಚಿಸಿ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.
ಕಳೆದ ನಾಲ್ಕು ದಿನಗಳ ಹಿಂದೆ ಪಂಜಾಬಿನ ಲೂಧಿಯಾನದಲ್ಲಿ ಆರ್ ಎಸ್ ಎಸ್ ಕಾರ್ಯಕರ್ತನ ಹತ್ಯೆ ನಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Uttar pradeshRashtriya Swayamsevak Sangh (RSS)Ghazipurಉತ್ತರRSS workerಆರ್ ಎಸ್ ಎಸ್ ಕಾರ್ಯಕರ್ತರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್)Rajesh Mishraರಾಜೇಶ್ ಮಿಶ್ರಾಘಾಜೀಪುರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


