ಮೋದಿ ನಮ್ಮೊಂದಿಗೆ ಇದ್ದಾರೆ, ಎಐಎಡಿಎಂಕೆಯನ್ನು ಯಾರೂ ಅಲುಗಾಡಿಸಲು ಸಾಧ್ಯವಿಲ್ಲ: ತಮಿಳುನಾಡು ಸಚಿವ
ನಮ್ಮ ಪಕ್ಷಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಬಲ ಇರುವವರೆಗೆ ಯಾರೂ ಎಐಎಡಿಎಂಕೆಯನ್ನು ಅಲುಗಾಡಿಸಲು ಸಾಧ್ಯವಿಲ್ಲ....

Published On :
ಚೆನ್ನೈ: ನಮ್ಮ ಪಕ್ಷಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಬಲ ಇರುವವರೆಗೆ ಯಾರೂ ಎಐಎಡಿಎಂಕೆಯನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ತಮಿಳುನಾಡು ಡೈರಿ ಸಚಿವ ಕೆ ಟಿ ರಾಜೇಂದ್ರ ಬಾಲಾಜಿ ಅವರು ಹೇಳಿದ್ದಾರೆ.
ಕಳೆದ ರಾತ್ರಿ ತಮಿಳುನಾಡಿನ ಅಂಡಿಪಟ್ಟಿಯಲ್ಲಿ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಾಲಾಜಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮೊಂದಿಗೆ ಇದ್ದಾರೆ. ಹೀಗಾಗಿ ಯಾರೂ ನಮ್ಮ ಪಕ್ಷವನ್ನು ಅಲುಗಾಡಿಸಲು ಮತ್ತು ನಾಶಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರ ಮೇಲೆ ನಮಗೆ ವಿಶ್ವಾಸವಿದೆ. ಪಳನಿಸ್ವಾಮಿ ಕ್ಯಾಂಪ್ ಗೆ ಪಕ್ಷದ ಎರಡೆಲೆ ಚಿಹ್ನೆ ಸಿಗಲಿದೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದಿದ್ದಾರೆ.
ಆಡಳಿತರೂಢ ಎಐಎಡಿಎಂಕೆಯನ್ನು ಪ್ರತಿಪಕ್ಷ ಡಿಎಂಕೆ ಸೇರಿದಂತೆ ಯಾರೂ ವಿರೋಧಿಸುತ್ತಿಲ್ಲ. ಎಐಎಡಿಎಂಕೆಯ ಸಾಮಾನ್ಯ ಸಭೆಯ ಶೇ.92ರಷ್ಟು ಸದಸ್ಯರು ಪಳನಿಸ್ವಾಮಿಗೆ ಬೆಂಬಲ ನೀಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


