ದೇಶ

ಮೆರ್ಸಲ್ ಚಿತ್ರದ ಸಂಭಾಷಣೆಗೆ ವಿರೋಧ : ಮೋದಿ ವಿರುದ್ಧ ರಾಹುಲ್ ಟೀಕೆ

ಮೆರ್ಸಲ್ ಚಿತ್ರದಲ್ಲಿ ಜಿಎಸ್ ಟಿ, ಡಿಜಿಟಲ್ ಇಂಡಿಯ ಬಗ್ಗೆ ಇರುವ ಸಂಭಾಷಣೆಗಳಿಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿರುವ ಬೆನ್ನಲ್ಲೇ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಮೋದಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ಮೆರ್ಸಲ್ ಚಿತ್ರದ ಸಂಭಾಷಣೆಗೆ ವಿರೋಧ : ಮೋದಿ ವಿರುದ್ಧ ರಾಹುಲ್ ಟೀಕೆ
ರಾಹುಲ್ ಗಾಂಧಿ
Published On :
ನವದೆಹಲಿ: ಮೆರ್ಸಲ್ ಚಿತ್ರದಲ್ಲಿ ಜಿಎಸ್ ಟಿ, ಡಿಜಿಟಲ್ ಇಂಡಿಯ ಬಗ್ಗೆ ಇರುವ ಸಂಭಾಷಣೆಗಳಿಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿರುವ ಬೆನ್ನಲ್ಲೇ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಮೋದಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. 
ಚಿತ್ರದ ಸಂಭಾಷಣೆಗೆ ವಿರೋಧ ವ್ಯಕ್ತಪಡಿಸಿ, ಹಸ್ತಕ್ಷೇಪ ಮಾಡುವ ಮೂಲಕ ತಮಿಳನಾಡಿನ ಜನತೆಯ ಹೆಮ್ಮೆಯನ್ನು ಕುಗ್ಗಿಸದಂತೆ ಪ್ರಧಾನಿ ಮೋದಿಗೆ ರಾಹುಲ್ ಒತ್ತಾಯಿಸಿದ್ದಾರೆ. ಸಿನಿಮಾ ತಮಿಳು ಸಂಸ್ಕೃತಿ ಹಾಗೂ ಭಾಷೆಯ ಅಭಿವ್ಯಕ್ತಿಯಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 
ಇದೇ ವೇಳೆ ನಟನ ಧರ್ಮದ ಕುರಿತು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಹೆಚ್ ರಾಜ ಮಾಡಿದ್ದ ಟ್ವೀಟ್ ಗೂ ವಿರೋಧ ವ್ಯಕ್ತವಾಗುತ್ತಿದೆ. ಅಷ್ಟೇ ಅಲ್ಲದೇ ಮೆರ್ಸಲ್ ವಿಜಯ್ ಅವರಿಗೆ ಆರ್ಥಿಕ ವಿಷಯಗಳಲ್ಲಿರುವ ಅಜ್ಞಾನವನ್ನೂ ತೋರಿಸುತ್ತದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.