ತಾಜ್'ಮಹಲ್ ಸುಂದರವಾದ ಸ್ಮಶಾನ: ಹರಿಯಾಣ ಸಚಿವ ಅನಿಲ್ ವಿಜ್
ತಾಜ್ ಮಹಲ್ ಕುರಿತಂತೆ ಬಿಜೆಪಿ ನಾಯಕ ಸಂಗೀತ್ ಸೋಮ್ ಅವರ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಹರಿಯಾಣ ಸಚಿವ ಅನಿಲ್ ವಿಜ್ ಅವರು ತಾಜ್'ಮಹಲ್ ಒಂದು ಸುಂದರವಾದ ಸ್ಮಶಾನವೆಂದು ವರ್ಣಿಸಿದ್ದಾರೆ...

Published On :
ಚಂಡೀಗಢ: ತಾಜ್ ಮಹಲ್ ಕುರಿತಂತೆ ಬಿಜೆಪಿ ನಾಯಕ ಸಂಗೀತ್ ಸೋಮ್ ಅವರ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಹರಿಯಾಣ ಸಚಿವ ಅನಿಲ್ ವಿಜ್ ಅವರು ತಾಜ್'ಮಹಲ್ ಒಂದು ಸುಂದರವಾದ ಸ್ಮಶಾನವೆಂದು ವರ್ಣಿಸಿದ್ದಾರೆ.
ತಾಜ್ ಮಹಲ್ ವಿವಾದ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಹರಿಯಾಣ ರಾಜ್ಯದ ಆರೋಗ್ಯ ಹಾಗೂ ಕ್ರೀಡಾ ಸಚಿವ ಅನಿಲ್ ವಿಜ್ ಅವರು, 'ತಾಜ್ ಮಹಲ್' ಸುಂದರವಾದ ಸ್ಮಶಾನ ಎಂದು ಹೇಳಿದ್ದಾರೆ.
ಉತ್ತರಪ್ರದೇಶ ಸರ್ಕಾರ ಇತ್ತೀಚೆಗಷ್ಟೇ ತನ್ನ ರಾಜ್ಯ ಪ್ರವಾಸೋದ್ಯಮ ಕೈಪಿಡಿಯಿಂದ ತಾಜ್ ಮಹಲ್ ನ್ನು ಕೈಬಿಟ್ಟಿತ್ತು. ಇದರ ಪರಿಣಾಮ ಇದೀಗ ಭಾರೀ ಟೀಕೆ, ವಿವಾದಗಳು ಸೃಷ್ಟಿಯಾಗತೊಡಗಿದೆ.
ತಾಜ್ ಮಹಲ್ ಕುರಿತಂತೆ ಪರ ಹಾಗೂ ವಿರೋಧಗಳ ಟೀಕೆಗಳು ಒಂದೆಡೆಯಾಗಿದ್ದರೆ, ಮತ್ತೊಂದೆಡೆ ರಾಜಕೀಯ ಕೆಸರೆರಚಾಟಗಳು ಆರಂಭಗೊಂಡಿವೆ.
ಈ ಹಿಂದೆ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಸಂಗೀತ್ ಸೋಮ್ ಅವರು, ತಾಜ್ ಮಹಲ್ ಕಟ್ಟಡವನ್ನು ನಿರ್ಮಿಸಿದವರು ದ್ರೋಹಿಗಳು. ಹೀಗಾಗಿ ಅದಕ್ಕೆ ಭಾರತೀಯ ಇತಿಹಾಸದಲ್ಲಿ ಯಾವುದೇ ಸ್ಥಾನವಿಲ್ಲ. ತಾಜ್ ಮಹಲ್ ಭಾರತೀಯ ಸಂಸ್ಕೃತಿಯಲ್ಲಿನ ಒಂದು ಕಪ್ಪು ಚುಕ್ಕೆ ಎಂದು ಹೇಳಿದ್ದರು.
ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿದ್ದ ಉತ್ತರಪ್ರದೇಶ ರಾಜ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ತಾಜ್'ಮಹಲ್'ನ್ನು ಯಾರು ನಿರ್ಮಾಣ ಮಾಡಿದರು, ಯಾವುದಕ್ಕಾಗಿ ನಿರ್ಮಾಣ ಮಾಡಿದರು ಎಂಬುದು ಮುಖ್ಯವಲ್ಲ, ತಾಜ್ ಮಹಲ್ ನಿರ್ಮಾಣವಾಗಿದ್ದು ಭಾರತೀಯ ಕಾರ್ಮಿಕರ ರಕ್ತ ಹಾಗೂ ಶ್ರಮದಿಂದ, ಹಾಗಾಗಿ ತಾಜ್ ಮಹಲ್ ನಮಗೆ ಅತ್ಯಂತ ಮುಖ್ಯವಾಗುತ್ತದೆ ಎಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


