ಜನಪ್ರತಿನಿಧಿಗಳು ಬಂದರೇ ಎದ್ದು ನಿಲ್ಲಿ: ಉತ್ತರ ಪ್ರದೇಶ ಸರ್ಕಾರದ ಹೊಸ ಆದೇಶ
ರಾಜ್ಯಮಟ್ಟದ ಎಲ್ಲಾ ಅಧಿಕಾರಿಗಳಿಗೆ ಉತ್ತರ ಪ್ರದೇಶ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಯಾವುದೇ ಸಭೆ ಸಮಾರಂಭಗಳಿಗೆ ಶಾಸಕರು, ಸಚಿವರು ...

Published On :
ಲಕ್ನೋ: ರಾಜ್ಯಮಟ್ಟದ ಎಲ್ಲಾ ಅಧಿಕಾರಿಗಳಿಗೆ ಉತ್ತರ ಪ್ರದೇಶ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಯಾವುದೇ ಸಭೆ ಸಮಾರಂಭಗಳಿಗೆ ಶಾಸಕರು, ಸಚಿವರು ಅಥವಾ ಸಂಸದರು ಬಂದಾಗ ಎಲ್ಲ ಸರ್ಕಾರಿ ಅಧಿಕಾರಿಗಳು ಎದ್ದು ನಿಂತು ಗೌರವ ಸೂಚಿಸಬೇಕು ಹಾಗೂ ಅವರನ್ನು ಸ್ವಾಗತಿಸಬೇಕು ಎಂದು ಸೂಚಿಸಿದೆ.
ಅಂತೆಯೇ ಗಣ್ಯ ವ್ಯಕ್ತಿಗಳು ಅಲ್ಲಿಂದ ಮರಳುವಾಗಲೂ ಇದೇ ಮಾದರಿಯನ್ನು ಅನುಸರಿಸಬೇಕು ಎಂದು ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಹೊಸ ಆದೇಶ ಹೊರಡಿಸಿದೆ.ಸ್ವತಃ ರಾಜ್ಯ ಮುಖ್ಯ ಕಾರ್ಯದರ್ಶಿ ರಾಜೀವ್ ಕುಮಾರ್ ಅವರೇ ಜನಪ್ರತಿನಿಧಿಗಳ ಶಿಷ್ಟಾಚಾರದ ಭಾಗವಾಗಿ ಈ ಸೂಚನೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಜೊತೆಗೆ ಶಿಷ್ಟಾಚಾರಗಳನ್ನು ಪಾಲಿಸದೇ ಇದ್ದರೆ ಅಂಥವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಅಧಿಕಾರಿಗಳು ನಮಗೆ ಗೌರವ ಕೊಡುತ್ತಿಲ್ಲ ಎಂದು ಅನೇಕ ಶಾಸಕರು ಹಾಗೂ ಸಂಸದರು ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಯವರು ಇಂತಹುದೊಂದು ಆದೇಶ ಹೊರಡಿಸಿದ್ದಾರೆ ಎಂದು ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
politiciansಅಧಿಕಾರಿಗಳುYogi Adityanathಯೋಗಿ ಆದಿತ್ಯನಾಥ್Uttar Pradesh governmentಉತ್ತರ ಪ್ರದೇಶ ಸರ್ಕಾರಎದ್ದು ನಿಲ್ಲು. Officersstand upಜನಪ್ರತಿನಿಧಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


