ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಸ್ಪತ್ರೆಯಿಂದ ಬಿಡುಗಡೆ
ಏಮ್ಸ್ ಆಸ್ಪತ್ರೆಯಲ್ಲಿ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆಂದು...

Published On :
ನವದೆಹಲಿ: ಏಮ್ಸ್ ಆಸ್ಪತ್ರೆಯಲ್ಲಿ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆಂದು ತಿಳಿದುಬಂದಿದೆ.
ಎಂದಿನಂತೆ ಸಾಮಾನ್ಯ ತಪಾಸಣೆಗಾಗಿ ವೆಂಕಯ್ಯ ನಾಯ್ಡು ಅವರು ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದಾರು. ಸಕ್ಕರೆ ಕಾಯಿಲೆ (ಶುಗರ್) ಹಾಗೂ ರಕ್ತದೊತ್ತಡ (ಬಿಪಿ) ಪ್ರಮಾಣದಲ್ಲಿ ಏರಿಕೆ ಕಂಡು ಬಂದ ಹಿನ್ನಲೆಯಲ್ಲಿ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಹೇಳಲಾಗುತ್ತಿತ್ತು.
ವೆಂಕಯ್ಯ ನಾಯ್ಡು ಅವರ ಆರೋಗ್ಯ ಉತ್ತಮವಾಗಿದ್ದು, ಮೂರು ದಿನಗಳ ಕಾಲ ವಿಶ್ರಾಂತಿಗೆ ಸಲಹೆಗಳನ್ನು ನೀಡಲಾಗಿದೆ ಎಂದು ಏಮ್ಸ್ ವೈದ್ಯರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


