ಮತ್ತೆ ಪಾಕ್ ಕದನ ವಿರಾಮ ಉಲ್ಲಂಘನೆ; 'ಪಾಪಿ'ಸ್ತಾನ ಸೈನಿಕರ ಗುಂಡಿಗೆ ಬಡ ಕೂಲಿ ಕಾರ್ಮಿಕನ ಸಾವು!
ಗಡಿಯಲ್ಲಿ ಪದೇ ಪದೇ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಇದೀಗ ಪಾಕಿಸ್ತಾನ ಸೈನಿಕರ ಗುಂಡಿಗೆ ಭಾರತದ ಗಡಿಯಲ್ಲಿದ್ದ ಬಡ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

Published On :
ಬಾರಾಮುಲ್ಲಾ: ಗಡಿಯಲ್ಲಿ ಪದೇ ಪದೇ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಇದೀಗ ಪಾಕಿಸ್ತಾನ ಸೈನಿಕರ ಗುಂಡಿಗೆ ಭಾರತದ ಗಡಿಯಲ್ಲಿದ್ದ ಬಡ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಕಮಲ್ ಕೋಟ್ ಸೆಕ್ಟರ್ ನಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ ಭಾರತೀಯ ಪೋಸ್ಟ್ ಗಳತ್ತ ಗುಂಡು ಹಾರಿಸಿದ್ದು, ಈ ವೇಳೆ ಗಡಿಯಲ್ಲಿ ಕೂಲಿ ಮಾಡುತ್ತಿದ್ದ ಓರ್ವ ಬಡ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದು, ಅಂತೆಯೇ ಗುಂಡಿನ ದಾಳಿಯಲ್ಲಿ ಓರ್ವ ಪುಟ್ಟ ಬಾಲಕಿ ಕೂಡ ಗಂಭೀರವಾಗಿ ಗಾಯಗೊಂಡಿದ್ದಾಳೆ ಎಂದು ತಿಳಿದುಬಂದಿದೆ. ಗಾಯಗೊಂಡ ಬಾಲಕಿಯನ್ನು ಗುಂಡಿನ ಚಕಮಕಿ ನಡುವೆಯೇ ಸೈನಿಕರು ಉರಿ ಸೆಕ್ಟರ್ ನಲ್ಲಿರುವ ಸೇನಾ ಅಸ್ಪತ್ರೆಗೆ ದಾಖಲು ಮಾಡಿದ್ದು, ಪ್ರಸ್ತುತ ಆಕೆಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಇನ್ನು ಪ್ರಸ್ತುತ ಪಾಕಿಸ್ತಾನ ಸೈನಿಕರ ಅಪ್ರಚೋದಿತ ದಾಳಿಯಿಂದಾಗಿ ಸಾವನ್ನಪ್ಪಿರುವ ಸ್ಥಳೀಯ ನಾಗರಿಕ ಬಡ ಕೂಲಿ ಕಾರ್ಮಿಕನಾಗಿದ್ದು, ಗಡಿಯಲ್ಲಿ ಸೈನಿಕರ ಸರಕುಗಳನ್ನು ಸಾಗಣೆ ಮಾಡುತ್ತಿದ್ದ ಎಂದು ಸೇನಾ ಮೂಲಗಳು ತಿಳಿಸಿವೆ. ನಿನ್ನೆ ಕೂಡ ಸೈನಿಕರ ಸರಕುಗಳನ್ನು ಸಾಗಿಸುವಾಗಲೇ ಪಾಕಿಸ್ತಾನ ಸೇನೆ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಆತನಿಗೆ ಗುಂಡು ತಗುಲಿ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಪಾಕಿಸ್ತಾನ ಸೇನೆಯ ಕದನ ವಿರಾಮ ಉಲ್ಲಂಘನೆ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಸೇನಾ ಮೂಲಗಳು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಶ್ರೀನಗರSrinagarPakistanಪಾಕಿಸ್ತಾನಜಮ್ಮು ಮತ್ತು ಕಾಶ್ಮೀರJammu and Kashmirಕದನ ವಿರಾಮ ಉಲ್ಲಂಘನೆcease fire violation
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


