ದೇಶ

ಹಿಮಾಚಲ ಪ್ರದೇಶ ಚುನಾವಣೆ: ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಬರುವ ನವೆಂಬರ್ ನಲ್ಲಿ ಹಿಮಾಚಲ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಹಿಮಾಚಲ ಪ್ರದೇಶ ಚುನಾವಣೆ: ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
ಹಿಮಾಚಲ ಪ್ರದೇಶ ಚುನಾವಣೆ: ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
Published On :
ಶಿಮ್ಲಾ: ಬರುವ ನವೆಂಬರ್ ನಲ್ಲಿ ಹಿಮಾಚಲ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಈ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಅಧ್ಯಕ್ಷ ಅಮಿತ್ ಷಾ ಅವರ ಹೆಸರು ಸೇರಿದೆ.
ಇನ್ನು ಪ್ರಮುಕ ಸಚಿವ ಸಂಪುಟ ಮಂತ್ರಿಗಳಾದ ರಾಜ್ ನಾಥ್ ಸಿಂಗ್, ಸುಷ್ಮಾ ಸ್ವರಾಜ್, ಉಮಾ ಭಾರತಿ, ಅರುಣ್ ಜೇಟ್ಲಿ, ನಿತಿನ್ ಗಡ್ಕರಿ ಮತ್ತು ಸ್ಮೃತಿ ಇರಾನಿ ಅವರುಗಳು ಚುನಾವಣಾ ಪ್ರಚಾರದ ಭಾಗವಾಗಲಿದ್ದಾರೆ.
ಬಿಜೆಪಿ ಆಡಳಿತವಿರುವ ರಾಜ್ಯದ ಮುಖ್ಯಮಂತ್ರಿಗಳು ಸಹ ಈ ಚುನಾವಣಾ ಪ್ರಚಾರ ಅಭಿಯಾನದಲ್ಲಿ ಭಾಗಿಯಾಗುತ್ತಿದ್ದು ಯೋಗಿ ಆದಿತ್ಯನಾಥ್, ಶಿವರಾಜ್ ಸಿಂಗ್ ಚೌಹಾಣ್, ತ್ರಿವೇಂದ್ರ ಸಿಂಗ್ ರಾವತ್ ಮತ್ತು ಮನೋಹರಲಾಲ್ ಖಟ್ಟರ್ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ.
ಒಟ್ಟು 68 ಕ್ಷೇತ್ರವನ್ನು ಒಳಗೊಂಡ ರಾಜ್ಯದ ಚುನಾವಣಾ ಫಲಿತಾಂಶ ಡಿ. 18 ರಂದು ಹೊರಬೀಳಲಿದೆ.. ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಅವಧಿ ಜ.7, 2018 ರಂದು ಕೊನೆಗೊಳ್ಳಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.