ದೇಶ

ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ: 2 ಪೊಲೀಸ್ ಅಧಿಕಾರಿಗಳ ಅಮಾನತು, ತನಿಖೆಗೆ ಆದೇಶಿಸಿದ ಸಿಎಂ ಯೋಗಿ

ಅಕ್ರಮ ಗಣಿಗಾರಿಕೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆಂಬ ಗಂಭೀರ ಆರೋಪಗಳು ಕೇಳಿಬಂದ ಹಿನ್ನಲೆಯಲ್ಲಿ ಕಠಿಣ ಕ್ರಮ ಕೈಗೊಂಡಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಇಬ್ಬರು ಪೊಲೀಸ್...

ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ: 2 ಪೊಲೀಸ್ ಅಧಿಕಾರಿಗಳ ಅಮಾನತು, ತನಿಖೆಗೆ ಆದೇಶಿಸಿದ ಸಿಎಂ ಯೋಗಿ
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
Published On :
ಲಖನೌ: ಅಕ್ರಮ ಗಣಿಗಾರಿಕೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆಂಬ ಗಂಭೀರ ಆರೋಪಗಳು ಕೇಳಿಬಂದ ಹಿನ್ನಲೆಯಲ್ಲಿ ಕಠಿಣ ಕ್ರಮ ಕೈಗೊಂಡಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದು ತನಿಖೆಗೆ ಆದೇಶಿಸಿದ್ದಾರೆಂದು ಸೋಮವಾರ ತಿಳಿಸಿದ್ದಾರೆ. 
ಹಮಿರ್ ಪುರದಲ್ಲಿ ಅಭಿವೃದ್ಧಿ ಕಾರ್ಯ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಪರಿಶೀಲನೆ ಕುರಿತಂತೆ ನಿನ್ನೆಯಷ್ಟೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಭೆಯೊಂದನ್ನು ನಡೆಸಿದ್ದರು. ಈವೇಳೆ ಕುರಾಲ ಮತ್ತು ಲಾಲ್ಪುರ ಪೊಲೀಸ್ ಠಾಣೆಯ ಮೇಲ್ವಿಚಾರಕರು ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದಾರೆಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಬಳಿಕ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ ಯೋಗಿಯವರು ಇಬ್ಬರು ಅಧಿಕಾರಿಗಳನ್ನು ಅಮಾನತುಮಾಡಿ ತನಿಖೆಗೆ ಆದೇಶಿಸಿದ್ದಾರೆಂದು ತಿಳಿದುಬಂದಿದೆ. 
ಅಲ್ಲದೆ, ಜಿಲ್ಲೆಯ ಪ್ರಮುಖ ವಿಚಾರಗಳು ಹಾಗೂ ಎಲ್ಲಾ ಕ್ರಿಮಿನಲ್ ಗಳ ಪಟ್ಟಿಯನ್ನು ಸಿದ್ಧಪಡಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆನ್ನಲಾಗಿದೆ. 
ಧನಾತ್ಮಕ ಬದಲಾವಣೆಗಳು ಅಭಿವೃದ್ಧಿ ಕಾರ್ಯಕ್ರಗಳ ಮೇಲೆ ಗಂಭೀರ ಪರಿಣಾಮ ಬೀರಲಿದ್ದು, ಭೂ ಕಬಳಿಕೆ ಹಾಗೂ ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದು ಸಭೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.