ಗುಜರಾತ್ ಬಿಟ್ಟು ಹಿಮಾಚಲ ಪ್ರದೇಶದ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದಕ್ಕೆ ಆಯೋಗದಿಂದ ಸ್ಪಷ್ಟನೆ
ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಯ ದಿನಾಂಕದ ಜೊತೆ ಗುಜರಾತ್ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡದೇ ಇರುವ ಚುನಾವಣಾ ಆಯೋಗದ ನಡೆಯನ್ನು ಪ್ರಶ್ನಿಸಲಾಗುತ್ತಿದ್ದು...

Published On :
ನವದೆಹಲಿ: ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಯ ದಿನಾಂಕದ ಜೊತೆ ಗುಜರಾತ್ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡದೇ ಇರುವ ಚುನಾವಣಾ ಆಯೋಗದ ನಡೆಯನ್ನು ಪ್ರಶ್ನಿಸಲಾಗುತ್ತಿದ್ದು, ಇದಕ್ಕೆ ಆಯೋಗದ ಮುಖ್ಯಸ್ಥರು ಸ್ಪಷ್ಟನೆ ನೀಡಿದ್ದಾರೆ.
ಹಿಮಾಚಲ ಪ್ರದೇಶ ಚುನಾವಣೆಯ ದಿನಾಂಕವನ್ನು ಗುಜರಾತ್ ಗಿಂತ ಮೊದಲು ಪ್ರಕಟಿಸಲು ಹವಾಮಾನ ಸೇರಿದಂತೆ ಹಲವು ಅಂಶಗಳು ಕಾರಣ ಎಂದು ಮುಖ್ಯ ಚುನಾವಣಾ ಆಯುಕ್ತ ಅಚಲ್ ಕುಮಾರ್ ಜ್ಯೋತಿ ತಿಳಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಹಿಮಪಾತವಾಗುವ ಸಾಧ್ಯತೆಗಳಿರುವುದರಿಂದ ನವೆಂಬರ್ ಮಧ್ಯ ದಿನಾಂಕಕ್ಕೂ ಮುನ್ನ ಚುನಾವಣೆ ನಡೆಸಬೇಕೆಂದು ರಾಜ್ಯಾಡಳಿತ ಹಾಗೂ ರಾಜಕೀಯ ಪಕ್ಷಗಳು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದವು ಈ ಹಿನ್ನೆಲೆಯಲ್ಲಿ ಗುಜರಾತ್ ಚುನಾವಣೆಗೂ ಮುನ್ನ ಹಿಮಾಚಲ ಪ್ರದೇಶ ಚುನಾವಣೆಯ ದಿನಾಂಕವನ್ನು ಘೋಷಿಸಿರುವುದಾಗಿ ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Gujaratಗುಜರಾತ್ವಿಧಾನಸಭಾ ಚುನಾವಣೆElectionsಹಿಮಾಚಲ ಪ್ರದೇಶಮುಖ್ಯ ಚುನಾವಣಾ ಆಯುಕ್ತHimachal PradeshChief Election Commissioner Achal Kumar Joti
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


