ದೇಶ

ಪ್ರಧಾನಿ ಸೆಲ್ಫಿ ಕ್ಲಿಕ್ಕಿಸಿಕೊಂಡಾಗಲೆಲ್ಲಾ ಚೀನಾ ಯುವಕರಿಗೆ ಉದ್ಯೋಗ ಸಿಗುತ್ತೆ: ರಾಹುಲ್ ಗಾಂಧಿ

ಮೋದಿಯ ಸೆಲ್ಫಿ ಬಗ್ಗೆಯೂ ರಾಹುಲ್ ಗಾಂಧಿ ಮಾತನಾಡಿದ್ದು, ನೀವು ಪ್ರತಿ ಬಾರಿ ಸೆಲ್ಫಿ ಕ್ಲಿಕ್ಕಿಸಿಕೊಂಡಾಗ ಚೀನಾದ ಯುವಕರಿಗೆ ಉದ್ಯೋಗ ದೊರೆಯುತ್ತದೆ ಎಂದು ಹೇಳಿದ್ದಾರೆ.

ಪ್ರಧಾನಿ ಸೆಲ್ಫಿ ಕ್ಲಿಕ್ಕಿಸಿಕೊಂಡಾಗಲೆಲ್ಲಾ ಚೀನಾ ಯುವಕರಿಗೆ ಉದ್ಯೋಗ ಸಿಗುತ್ತೆ: ರಾಹುಲ್ ಗಾಂಧಿ
Published On :
ಗಾಂಧಿ ನಗರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸರಕು ಮತ್ತು ಸೇವಾ ತೆರಿಗೆ( ಜಿಎಸ್ ಟಿ) ಯನ್ನು ಗಬ್ಬರ್ ಸಿಂಗ್ ಟ್ಯಾಕ್ಸ್ ಎಂದಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನೋಟು ನಿಷೇಧದಿಂದ ಚೇತರಿಸಿಕೊಳ್ಳುತ್ತಿರುವ ದೇಶಕ್ಕೆ ಮತ್ತೊಂದು ಹೊಡೆತ ನೀಡಿದೆ ಎಂದು ಆರೋಪಿಸಿದ್ದಾರೆ. 
ಗುಜರಾತ್ ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ರಾಹುಲ್ ಗಾಂಧಿ, ಜಿಎಸ್ ಟಿ ಅಂದ್ರೆ ಗಬ್ಬರ್ ಸಿಂಗ್ ಟ್ಯಾಕ್ಸ್, ನರೇಂದ್ರ ಮೋದಿ ವೈಯಕ್ತಿಕ ಹುಚ್ಚಾಟಿಕೆಗಾಗಿ ನೋಟು ನಿಷೇಧವನ್ನು ಕಳೆದ ವರ್ಷ ಜಾರಿಗೆ ತಂದು ಲಕ್ಷಾಂತರ ಜನರಿಗೆ ಸಮಸ್ಯೆ ಉಂಟುಮಾಡಿದ್ದರು, ನಾವು ಜಿಎಸ್ ಎಸ್ ಟಿ ತೆರಿಗೆ ಸ್ಲ್ಯಾಬ್ ನ್ನು ಶೇ.18ಕ್ಕೆ ಇಳಿಕೆ ಮಾಡಲು ಮನವಿ ಮಾಡಿದ್ದೆವು. ಆದರೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಲಿಲ್ಲ ಮೋದಿ ಅವರ ಸರ್ಕಾರ ಬಡವರ ವಿರೋಧಿ ಸರ್ಕಾರ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. 
ಇದೇ ವೇಳೆ ಮೋದಿಯ ಸೆಲ್ಫಿ ಬಗ್ಗೆಯೂ ರಾಹುಲ್ ಗಾಂಧಿ ಮಾತನಾಡಿದ್ದು, ನೀವು ಪ್ರತಿ ಬಾರಿ ಸೆಲ್ಫಿ ಕ್ಲಿಕ್ಕಿಸಿಕೊಂಡಾಗ ಚೀನಾದ ಯುವಕರಿಗೆ ಉದ್ಯೋಗ ದೊರೆಯುತ್ತದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.