ದೇಶ

ಅಫ್ಘನ್ ಅಧ್ಯಕ್ಷ ಅಶ್ರಫ್ ಘನಿ ದೆಹಲಿಗೆ ಆಗಮನ

ಆಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ ಮಂಗಳವಾರ ಬೆಳಗ್ಗೆ ದೆಹಲಿಗೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಲಿದ್ದಾರೆ.

ಅಫ್ಘನ್ ಅಧ್ಯಕ್ಷ ಅಶ್ರಫ್ ಘನಿ ದೆಹಲಿಗೆ ಆಗಮನ
ಅಶ್ರಫ್ ಘನಿ ಅವರನ್ನು ಬರಮಾಡಿಕೊಂಡ ಅಧಿಕಾರಿಗಳು
Published On :
ನವದೆಹಲಿ: ಆಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ ಮಂಗಳವಾರ ಬೆಳಗ್ಗೆ ದೆಹಲಿಗೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಲಿದ್ದಾರೆ.
ಆಫ್ಘಾನಿಸ್ತಾನದಲ್ಲಿನ ಆಂತರಿಕ ಹಿಂಸಾಚಾರ ಮತ್ತು ಭದ್ರತೆಗೆ ಸಂಬಂಧಿಸಿದಂತೆ ಅಶ್ರಫ್ ಘನಿ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ನಡೆಸಲಿದ್ದು, ಉಭಯ ದೇಶಗಳೂ ಒಟ್ಟುಗೂಡಿ ಭಯೋತ್ಪಾದನೆಯನ್ನು  ಎದುರಿಸುವ ಕುರಿತು ಉಭಯ ನಾಯಕರು ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಧಾನಿ ಮೋದಿ ಅವರನ್ನು ಮಾತ್ರವಲ್ಲದೇ ಘನಿ, ರಾಷ್ಟ್ರಪತಿ ಕೋವಿಂದ್ ಅವರನ್ನು ಮಾಡಿ ಚರ್ಚಿಸಲಿದ್ದು, ಬಳಿಕ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಮಾತುಕತೆ  ನಡೆಸಲಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.