ಭಾರತ-ಚೀನಾ ಗಡಿಯಲ್ಲಿ ಇನ್ನೂ 50 ಔಟ್-ಪೋಸ್ಟ್ ಗಳ ನಿರ್ಮಾಣಕ್ಕೆ ಕೇಂದ್ರದ ಚಿಂತನೆ
ಭಾರತ-ಚೀನಾ ದೇಶಗಳ ಗಡಿಯಲ್ಲಿ 50ಕ್ಕೂ ಹೆಚ್ಚು ಐಟಿಬಿಪಿ ಪೋಸ್ಟ್ ಗಳನ್ನು ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಮಂಗಳವಾರ ನಿರ್ಧಾರ ಕೈಗೊಂಡಿದೆ...

Published On :
ನೊಯ್ಡಾ: ಭಾರತ-ಚೀನಾ ದೇಶಗಳ ಗಡಿಯಲ್ಲಿ 50ಕ್ಕೂ ಹೆಚ್ಚು ಐಟಿಬಿಪಿ ಪೋಸ್ಟ್ ಗಳನ್ನು ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಮಂಗಳವಾರ ನಿರ್ಧಾರ ಕೈಗೊಂಡಿದೆ.
ಐಟಿಬಿಪಿಯ 56ನೇ ರೈಸಿಂಗ್ ಡೇ ಸಮಾರಂಭದಲ್ಲಿ ಮಾತನಾಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ಭಾರತ-ಚೀನಾ ಗಡಿಯಲ್ಲಿ 50ಕ್ಕೂ ಹೆಚ್ಚು ಇಂಡೋ-ಟಿಬೆಟ್ ಬಾರ್ಡರ್ ಪೋಸ್ಟ್ ಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಆಲ್ಲದೆ, ಐಟಿಬಿಪಿ ಯೋಧರಿಗೆ ಚೀನಾ ಭಾಷೆ ಹಾಗೂ ಹವಾವಾನ ನಿಯಂತ್ರಕ ತಂತ್ರಜ್ಞಾನ ಬಳಕೆಯ ಬಗ್ಗೆಯೂ ತರಬೇತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಅರುಣಾಚಲ ಪ್ರದೇಶ, ಹಿಮಾಚಲಪ್ರದೇಶ, ಉತ್ತರಾಖಂಡಗಳ ಗಡಿ ಪ್ರದೇಶಗಳಲ್ಲಿ 25 ಗಡಿ ರಸ್ತೆಗಳ ನಿರ್ಮಾಣ, ಸಿಬ್ಬಂದಿಗಳಿಗೆ ವಿಶೇಷ ಲಘು ತೂಕದ ಚಳಿಯ ಉಡುಗೆ, ಗಸ್ತು ತಿರುಗಲು ಸ್ನೇ ಸ್ಕೂಟರ್ ಗಳನ್ನು ಒದಗಿಸುವುದಾಗಿಯೂ ಇದೇ ವೇಳೆ ರಾಜನಾಥ್ ಸಿಂಗ್ ಅವರು ಹೇಳಿದ್ದು, ಐಟಿಬಿಪಿ ಸಾಮರ್ಥ್ಯವನ್ನು ಹೆಚ್ಚಿಸವ ಉದ್ದೇಶದಿಂದ ಸರ್ಕಾರ ಈ ರೀತಿಯ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ಅತೀವ್ರ ಚಳಿಯಿರುವ ಗಡಿ ಪ್ರದೇಶದಲ್ಲಿ 20 ಡಿಗ್ರಿ ಸೆಲ್ಸಿಯಸ್ ನಷ್ಟು ಉಷ್ಣಾಂಶ ಕಾಪಾಡುವ ಸಲುವಾಗಿ ಈಗಾಗಲೇ ಉತ್ತಮ ತಂತ್ರಜ್ಞಾನ ಬಳಕೆಗೆ ಸರ್ಕಾರ ನಿರ್ಧಾರ ಕೈಗೊಂಡಿದೆ. 1962 ರೈಸ್ಡ್ ಪಡೆಗಳಿಗೆ ನೀಡಲಾಗುತ್ತಿರುವ ಮೂಲಭೂತ ಸೌಕರ್ಯಗಳ ಕುರಿತು ನಮಗೆ ತೃಪ್ತಿಯಿಲ್ಲ. ಹೀಗಾಗಿ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ಈ ಬಗ್ಗೆ ಕಾರ್ಯಗಳನ್ನು ಮಾಡಲಾಗುತ್ತಿದೆ. 35 ಹಳೆಯ ಅತ್ಯಂತ ಎತ್ತರದ ಗಡಿ ಪ್ರದೇಶಗಳನ್ನು ಮೇಲ್ದರ್ಜೆಗೇರಿಸಲಾಗುತ್ತದೆ.
ಐಟಿಬಿಪಿ ಗಡಿ ಪ್ರದೇಶಗಳಲ್ಲಿ ರಸ್ತೆಗಳು, ಮೊಬೈಲ್, ಸ್ಯಾಟಲೈಟ್ ಸಂಪರ್ಕಗಳನ್ನು ಒದಗಿಸುವ ಕುರಿತು ಕೆಲಸಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಗಡಿಯಲ್ಲಿ ಉತ್ತಮ ರೀತಿಯ ಬಾಂಧವ್ಯಗಳನ್ನು ಹೊಂದುವಂತೆ ಐಟಿಬಿಪಿ ಯೋಧರಿಗೆ ಕಿವಿ ಮಾತು ಹೇಳಿರುವ ಅವರು, ಗಡಿಯಲ್ಲಿ ಹುತಾತ್ಮರಾಗುವ ಒಬ್ಬ ಯೋಧನ ಕುಟುಂಬದ ಜವಾಬ್ದಾರಿಯನ್ನು ಐಟಿಬಿಟಿ ಅಧಿಕಾರಿಗಳು ತೆಗೆದುಕೊಳ್ಳಬೇಕು. ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಶೇ.50 ರಷ್ಟು ಅಂಗವೈಕಲ್ಯ ಸಮಸ್ಯೆಗಳಿಂದ ಬಳಲುತ್ತಿರುವ ಯೋಧರಿಗೆ ಸಹಾಯ ಮಾಡಲು ಸಚಿವಾಲಯದ ಈಗಾಗಲೇ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.
ಬಳಿಕ ಜಮ್ಮು ಮತ್ತು ಕಾಶ್ಮೀರದ ಸಮಸ್ಯೆ ಹಾಗೂ ವಿಚಾರಗಳ ಕುರಿತು ಕೇಂದ್ರ ಸರ್ಕಾರದ ವತಿಯಿಂದ ನೂತನವಾಗಿ ನೇಮಕಗೊಂಡಿರುವ ಸಂಧಾನಕಾರ ದಿನೇಶ್ವರ್ ಶರ್ಮಾ ಕುರಿತಂತೆ ಮಾತನಾಡಿರುವ ಅವರು, ಜಮ್ಮು ಮತ್ತು ಕಾಶ್ಮೀರ ವಿಚಾರಗಳ ಕುರಿತಂತೆ ಭಾರತ ಸರ್ಕಾರದ ವತಿಯಿಂದ ದಿನೇಶ್ವರ್ ಶರ್ಮಾ ಅವರನ್ನು ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಲಾಗಿದೆ. ಹೇಗೆ... ಹಾಗೂ ಯಾವ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳಬೇಕೆಂದು ಅವರಿಗೆ ಬಿಟ್ಟ ವಿಚಾರ ಎಂದು ಹೇಳಿದ್ದಾರೆ.
ದಿನೇಶ್ವರ್ ಶರ್ಮಾ ಅವರ ನೇಮಕಾತಿಯನ್ನು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಸ್ವಾಗತಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


