ಬಯಲು ಶೌಚದಲ್ಲಿದ್ದ ಮಹಿಳೆಯ ಫೋಟೋ ಕ್ಲಿಕ್ಕಿಸಿದ ಬಿಜೆಪಿ ನಾಯಕ, ಪ್ರಕರಣ ದಾಖಲು
ಬಿಜೆಪಿ ನಾಯಕನೋರ್ವ ಬಯಲು ಶೌಚಕ್ಕೆ ತೆರಳಿದ್ದ ಮಹಿಳೆಯ ಫೋಟೋ ಕ್ಲಿಕ್ಕಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

Published On :
ಮಧ್ಯಪ್ರದೇಶ: ಬಿಜೆಪಿ ನಾಯಕನೋರ್ವ ಬಯಲು ಶೌಚಕ್ಕೆ ತೆರಳಿದ್ದ ಮಹಿಳೆಯ ಫೋಟೋ ಕ್ಲಿಕ್ಕಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಎಎನ್ಐ ಮಾಹಿತಿಯ ಪ್ರಕಾರ ಗುನ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ನೀಚ ಕೃತ್ಯ ಎಸಗಿದ ವ್ಯಕ್ತಿಯನ್ನು ಬಿಜೆಪಿಯ ವಿಭಾಗೀಯ ಅಧ್ಯಕ್ಷ ಪ್ರದೀಪ್ ಭಟ್ ಎಂದು ಗುರುತಿಸಲಾಗಿದೆ. ಮಹಿಳೆ ದಾಖಲಿಸಿರುವ ದೂರಿನ ಪ್ರಕಾರ, ಬಹಿರ್ದೆಸೆಗೆ ಹೋಗಿದ್ದಾಗ ತನ್ನ ಫೋಟೋ ತೆಗೆದಿದ್ದ ಪ್ರದೀಪ್ ಭಟ್ ಆಕೆಗೆ ಕಿರುಕುಳ ನೀಡುತ್ತಿದ್ದ ಎಂದು ತಿಳಿದುಬಂದಿದೆ.
ಮಹಿಳೆ ನೀಡಿರುವ ದೂರಿನ ಅನ್ವಯ ಪ್ರದೀಪ್ ವಿರುದ್ಧ ಸೆಕ್ಷನ್ 354ಸಿ ಹಾಗೂ 294 ಐಪಿಸಿ ಪ್ರಕಾರ ಪ್ರಕರಣ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


