ಪ್ರಧಾನಿ ಮೋದಿ-ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ಮಾತುಕತೆ: ಉಗ್ರವಾದ ನಿರ್ಮೂಲನೆಗೆ ಪಣ
ಭಾರತಕ್ಕೆ ಭೇಟಿ ನೀಡಿರುವ ಅಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಪ್ರಾದೇಶಿಕ ಹಾಗೂ ಜಾಗತಿಕ ಮಟ್ಟದ ವಿಷಯಗಳನ್ನು ಚರ್ಚಿಸಿದ್ದಾರೆ.

Published On :
ನವದೆಹಲಿ: ಭಾರತಕ್ಕೆ ಭೇಟಿ ನೀಡಿರುವ ಅಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಪ್ರಾದೇಶಿಕ ಹಾಗೂ ಜಾಗತಿಕ ಮಟ್ಟದ ವಿಷಯಗಳನ್ನು ಚರ್ಚಿಸಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಭದ್ರತೆ ಹಾಗೂ ಸ್ಥಿರತೆ ಕಾಯ್ದುಕೊಳ್ಳುವುದಕ್ಕೆ ಸಂಬಂಧಿಸಿದಂತೆ ಮೋದಿ ಚರ್ಚಿಸಿದ್ದು, ನೆರೆ ರಾಷ್ಟ್ರ ಮೊದಲು ಎಂಬ ತತ್ವವನ್ನು ಮುಂದುವರೆಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿಯವರನ್ನು ಸ್ವಾಗತಿಸಿದ್ದಾರೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ರವೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ- ಅಶ್ರಫ್ ಘನಿ ಅವರ ದ್ವಿಪಕ್ಷೀಯ ಮಾತುಕತೆಯಲ್ಲಿ ಭಯೋತ್ಪಾದನೆಯ ಪ್ರಸ್ತಾಪವೂ ಆಗಿದ್ದು, ಉಗ್ರವಾದವನ್ನು ನಿರ್ಮೂಲನೆ ಮಾಡುವ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎಂದು ರವೀಶ್ ಕುಮರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿಭಾರತ ಭೇಟಿindia visitಅಶ್ರಫ್ ಘನಿAfghanistan President Ashraf Ghaniಅಫ್ಘಾನ್ ಅಧ್ಯಕ್ಷ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


