2015 ರ ಬಿಜೆಪಿ ಕಚೇರಿ ಧ್ವಂಸ ಪ್ರಕರಣ: ಹಾರ್ದಿಕ್ ಪಟೇಲ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ!
ಮೆಹ್‌ಸಾನ ಜಿಲ್ಲೆಯ ನ್ಯಾಯಾಲಯ ಹಾರ್ದಿಕ್ ಪಟೇಲ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

Published On :
ಅಹಮದಾಬಾದ್: ಮೆಹ್‌ಸಾನ ಜಿಲ್ಲೆಯ ನ್ಯಾಯಾಲಯ ಹಾರ್ದಿಕ್ ಪಟೇಲ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
2015 ರಲ್ಲಿ ಬಿಜೆಪಿ ಶಾಸಕರ ಕಚೇರಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಹಾಜರಾಗಲು ಸೂಚಿಸಲಾಗಿತ್ತಾದರೂ ಹಾರ್ದಿಕ್ ಪಟೇಲ್ ಎರಡು ಬಾರಿ ಕೋರ್ಟ್ ಗೆ ಹಾಜರಾಗುವಲ್ಲಿ ವಿಫಲರಾಗಿದ್ದರು. ಈ ಹಿನ್ನೆಲೆಯಲ್ಲಿ
ಕೋರ್ಟ್ ಹಾರ್ದಿಕ್ ಪಟೇಲ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಮೀಸಲಾತಿಗೆ ಆಗ್ರಹಿಸಿ 2015 ರಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ವಿಸ್ನಗರ್ ನ ಬಿಜೆಪಿ ಶಾಸಕ ರಿಷೀಕೇಶ್ ಪಟೇಲ್ ಅವರ ಕಚೇರಿಯನ್ನು ಧ್ವಂಸಗೊಳಿಸುವ ಆರೋಪ ಎದುರಿಸುತ್ತಿರುವ ಹಾರ್ದಿಕ್ ಪಟೆಲ್ ಹಾಗೂ ಇತರರಿಗೆ ಈ ಹಿಂದೆ ಜಾಮೀನು ನೀಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


