ತ್ರಾಲ್ ನಲ್ಲಿ ಹಿಜ್ಬುಲ್ ಉಗ್ರ ಅರಿಜೂ ಬಶೀರ್ ಬಂಧನ
ಕಾಶ್ಮೀರದ ಕುಖ್ಯಾತ ಉಗ್ರ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ನ ಪ್ರಮುಖ ಉಗ್ರ ಅರಿಜೂ ಬಶೀರ್ ನನ್ನು ಮಂಗಳವಾರ ಭದ್ರತಾ ಪಡೆಗಳು ಬಂಧಿಸಿವೆ ಎಂದು ತಿಳಿದುಬಂದಿದೆ.

Published On :
ಶ್ರೀನಗರ: ಕಾಶ್ಮೀರದ ಕುಖ್ಯಾತ ಉಗ್ರ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ನ ಪ್ರಮುಖ ಉಗ್ರ ಅರಿಜೂ ಬಶೀರ್ ನನ್ನು ಮಂಗಳವಾರ ಭದ್ರತಾ ಪಡೆಗಳು ಬಂಧಿಸಿವೆ ಎಂದು ತಿಳಿದುಬಂದಿದೆ.
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಯುವಕರನ್ನು ಸೆಳೆಯುತ್ತಿದ್ದ ಮತ್ತು ಸಂಘಟನೆಯಲ್ಲಿ ಸಕ್ರಿಯನಾಗಿ ಕಾರ್ಯ ನಿರ್ವಹಿಸುತ್ತಿದ್ದ ಅರಿಜೂ ಬಶೀರ್ ನನ್ನು ಕಾಶ್ಮೀರ ಪೊಲೀಸರು ಹಾಗೂ ಸೇನಾಪಡೆಗಳು ತ್ರಾಲ್ ನಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ನಿನ್ನೆಯಷ್ಟೇ ಎನ್ ಐಎ ಅಧಿಕಾರಿಗಳು ಉಗ್ರ ಸಂಘಟನೆಗಳಿಗೆ ಆರ್ಥಿಕ ನೆರವು ನೀಡಿದ ಆರೋಪದ ಮೇರೆಗೆ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಮುಖ್ಯಸ್ಥ ಸೈಯ್ಯದ್ ಸಲಾಹುದ್ದೀನ್ ನ ಪುತ್ರ ಸೈಯ್ಯದ್ ಶಹೀದ್ ಯೂಸುಫ್ ನನ್ನು ಬಂಧಿಸಿದ್ದರು. ಇದರ ಬೆನ್ನಲ್ಲೇ ಉಗ್ರ ಬಶೀರ್ ನನ್ನೂ ಕೂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಬಶೀರ್ ಬಂಧನದ ಬೆನ್ನಲ್ಲೇ ಕಾಶ್ಮೀರದಾದ್ಯಂತ ಭದ್ರತಾ ಪಡೆಗಳು ಅಲರ್ಟ್ ಘೋಷಣೆ ಮಾಡಿದ್ದು, ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಶ್ರೀನಗರSrinagarಜಮ್ಮು ಮತ್ತು ಕಾಶ್ಮೀರJammu and Kashmirಭಾರತೀಯ ಸೇನೆHizbul Mujahideenಹಿಜ್ಬುಲ್ ಮುಜಾಹಿದ್ದೀನ್Terrorist arrestಉಗ್ರನ ಬಂಧನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


