ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರೆಕ್ಸ್ ಟಿಲ್ಲರ್ ಸನ್ ಭೇಟಿ ಮಾಡಿದ ಸುಷ್ಮಾ ಸ್ವರಾಜ್
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಬುಧವಾರ ಭಾರತಕ್ಕೆ ಮೊದಲ ಬಾರಿ ಭೇಟಿ ನೀಡಿದ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ರೆಕ್ಸ್ ಟಿಲ್ಲರ್ ಸನ್ ಅವರನ್ನು ...

Published On :
ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಬುಧವಾರ ಭಾರತಕ್ಕೆ ಮೊದಲ ಬಾರಿ ಭೇಟಿ ನೀಡಿದ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ರೆಕ್ಸ್ ಟಿಲ್ಲರ್ ಸನ್ ಅವರನ್ನು ಭೇಟಿ ಮಾಡಿ, ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚೆ ನಡೆಸಿದ್ದಾರೆ.
ರಾಜತಾಂತ್ರಿಕ ಸಂಬಂಧ ವೃದ್ಧಿಗಾಗಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿಯಾಗಿ ಭಾರತಕ್ಕೆ ಮೊದಲ ಬಾರಿ ಭೇಟಿ ನೀಡಿರುವ ರೆಕ್ಸ್ ಟಿಲ್ಲರ್ ಸನ್ ಅವರಿಗೆ ಸುಷ್ಮಾ ಸ್ವರಾಜ್ ಅವರು ಆತ್ಮೀಯ ಸ್ವಾಗತ ನೀಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು ಇಂದು ಟ್ವೀಟ್ ಮಾಡಿದ್ದಾರೆ.
ಭಾರತ-ಅಮೆರಿಕ ಸಂಬಂಧ ವೃದ್ಧಿಗಾಗಿ ಟಿಲ್ಲರ್ ಸನ್ ಅವರು ನಿನ್ನೆ ಸಂಜೆ ದೆಹಲಿಗೆ ಆಗಮಿಸಿದ್ದು, ಭಾರತ ಜೊತೆಗಿನ ಅಮೆರಿಕ ಸಂಬಂಧದ ವ್ಯಾಪ್ತಿ ದಕ್ಷಿಣ ಏಷ್ಯಾಕ್ಕೆ ಮಾತ್ರ ಸೀಮಿತವಾಗಿಲ್ಲ, ಆದರೆ ಪಾಕಿಸ್ತಾನದ ಪ್ರಾದೇಶಿಕ ಹಿತಾಸಕ್ತಿಗಳನ್ನು ಮೀರಿ ಭಾರತದೊಂದಿಗೆ ಉತ್ತಮ ಸಂಬಂಧ ಹೊಂದಲು ಬಯಸುತ್ತದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sushma Swarajಸುಷ್ಮಾ ಸ್ವರಾಜ್ಅಮೆರಿಕ ವಿದೇಶಾಂಗ ಕಾರ್ಯದರ್ಶಿRex TillersonUS Secretary of Stateರೆಕ್ಸ್ ಟಿಲ್ಲರ್ ಸನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


