ಖ್ಯಾತ ಶಾಸ್ತ್ರೀಯ ಗಾಯಕಿ ಗಿರಿಜಾ ದೇವಿ ನಿಧನ
ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕಿ ಗಿರಿಜಾ ದೇವಿ(88 ವರ್ಷ) ಅವರು ಹೃದಯಾಘಾತಕ್ಕೆ ಒಳಗಾಗಿ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

Published On :
ಕೋಲ್ಕತಾ: ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕಿ ಗಿರಿಜಾ ದೇವಿ(88 ವರ್ಷ) ಅವರು ಹೃದಯಾಘಾತಕ್ಕೆ ಒಳಗಾಗಿ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಗಿರಿಜಾ ದೇವಿ ಅವರು ನಿನ್ನೆ ಮಧ್ಯಾಹ್ನದ ಸುಮಾರಿನಲ್ಲಿ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಹೀಗಾಗಿ ನಿನ್ನೆ ಮಧ್ಯಾಹ್ನವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ‘ಠುಮ್ರಿ’ಯ ರಾಣಿ ಎಂದೇ ಖ್ಯಾತರಾಗಿದ್ದ ಗಿರಿಜಾದೇವಿ ಅವರು ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿಗಳನ್ನು ಪಡೆದಿದ್ದರು.
88 ವರ್ಷ ವಯಸ್ಸಿನ ಗಿರಿಜಾ ದೇವಿ ಅವರು ಓರ್ವ ಮಗಳನ್ನು ಅಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


