ದೇಶ

ಗುಜರಾತ್ ಚುನಾವಣೆಯ ನಂತರವೇ ಹಿಮಾಚಲ ಚುನಾವಣೋತ್ತರ ಸಮೀಕ್ಷೆಗೆ ಅವಕಾಶ

ಹಿಮಾಚಲ ಪ್ರದೇಶ ಮತ್ತು ಗುಜರಾತ್ ವಿಧಾನಸಭೆ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ...

ಗುಜರಾತ್ ಚುನಾವಣೆಯ ನಂತರವೇ ಹಿಮಾಚಲ ಚುನಾವಣೋತ್ತರ ಸಮೀಕ್ಷೆಗೆ ಅವಕಾಶ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಹಿಮಾಚಲ ಪ್ರದೇಶ ಮತ್ತು ಗುಜರಾತ್ ವಿಧಾನಸಭೆ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ತಿಳಿಯಲು ಜನ ಡಿಸೆಂಬರ್ 14ರ ವರೆಗೆ ಕಾಯಬೇಕು ಎಂದು ಕೇಂದ್ರ ಚುನಾವಣಾ ಆಯೋಗದ ಹಿರಿಯ ಅಧಿಕಾರಿಯೊಬ್ಬರು ಗುರುವಾರ ಹೇಳಿದ್ದಾರೆ.
ಎಲ್ಲಾ ರಾಜ್ಯಗಳ, ಎಲ್ಲಾ ಹಂತದ ಮತದಾನ ಮುಕ್ತಾಯವಾದ ಅರ್ಧ ಗಂಟೆಯ ನಂತರವೇ ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಬೇಕು ಎಂದು ಚುನಾವಣಾ ಆಯೋಗದ ನಿರ್ದೇಶನವಿದೆ. ಹೀಗಾಗಿ ಡಿಸೆಂಬರ್ 14ರ ನಂತರವೇ ಹಿಮಾಚಲ ಪ್ರದೇಶ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಪ್ರಕಟಿಸಲು ಅವಕಾಶ ನೀಡಲಾಗಿದೆ.
ಹಿಮಾಚಲ ಪ್ರದೇಶದಲ್ಲಿ ಡಿಸೆಂಬರ್ 9ರಂದು ಒಂದೇ ಹಂತದ ಮತದಾನ ನಡೆಯುತ್ತಿದ್ದು, ಗುಜರಾತ್ ನಲ್ಲಿ ಡಿಸೆಂಬರ್ 9 ಮತ್ತು ಡಿಸೆಂಬರ್ 14ರಂದು ಎರಡು ಹಂತದ ಮತದಾನ ನಡೆಯಲಿದೆ. ಗುಜರಾತ್ ನ ಎರಡು ಹಂತಗಳ ಮತದಾನ ಮುಗಿಯುವವರೆಗೆ ಚುನಾವಣೋತ್ತರ ಸಮೀಕ್ಷೆ ಬಹಿರಂಗಪಡಿಸುವಂತಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.