ದೇಶ

ಮುಂಬೈನ ಬಾಂದ್ರಾದಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ

ಮುಂಬೈನ ಬಾಂದ್ರಾದ ರೇಲ್ವೆ ನಿಲ್ದಾಣದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿಶಾಮಕ ಸಿಬ್ಬಂದಿಗಳು ತೊಡಗಿದ್ದಾರೆ...

ಮುಂಬೈನ ಬಾಂದ್ರಾದಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ
ಬಾಂದ್ರಾ ರೈಲ್ವೆ ನಿಲ್ದಾಣ
Published On :
ಮುಂಬೈ: ಮುಂಬೈನ ಬಾಂದ್ರಾದ ರೇಲ್ವೆ ನಿಲ್ದಾಣದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿಶಾಮಕ ಸಿಬ್ಬಂದಿಗಳು ತೊಡಗಿದ್ದಾರೆ. 
ರೇಲ್ವೆ ನಿಲ್ದಾಣದಲ್ಲಿ ಅಗ್ನಿ ಅವಘಡ ಸಂಭವಿಸಿದ್ದರಿಂದ ರೈಲು ಸೇವೆಗಳನ್ನು ನಿಲ್ಲಿಸುವಂತೆ ಹಿರಿಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. 
ಬೆಂಕಿ ನಂದಿಸುವ ಕಾರ್ಯದಲ್ಲಿ 16 ಅಗ್ನಿಶಾಮಕ ವಾಹನ ಸಿಬ್ಬಂದಿಗಳು ತೊಡಗಿದ್ದು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಇನ್ನು ಅಗ್ನಿ ಅವಘಡದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. 
ಮುನಿಸಿಪಲ್ ಕಾರ್ಪೋರೇಷನ್ ಅವರು ಬಾಂದ್ರಾದ ಸ್ಥಳೀಯ ರೈಲು ನಿಲ್ದಾಣದ ಬಳಿ ಕಟ್ಟಡ ತೆರವುಗೊಳಿಸುತ್ತಿರುವ ವೇಳೆ ಅಗ್ನಿ ಅವಘಡ ಸಂಭವಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.