ದೇಶ

ಸರ್ಜಿಕಲ್ ಸ್ಟ್ರೈಕ್ ವೇಳೆ ಗಡಿ ಉಲ್ಲಂಘಿಸಿ ಹೋದ ಯೋಧನಿಗೆ 3 ತಿಂಗಳು ಜೈಲು ಶಿಕ್ಷೆ

ಕಳೆದ ವರ್ಷ ಸರ್ಜಿಕಲ್ ಸ್ಟ್ರೈಕ್ ಸಮಯದಲ್ಲಿ ಆಕಸ್ಮಿಕವಾಗಿ ಗಡಿ ಉಲ್ಲಂಘಿಸಿ ಕಳೆದ ಜನವರಿಯಲ್ಲಿ ...

ಸರ್ಜಿಕಲ್ ಸ್ಟ್ರೈಕ್ ವೇಳೆ ಗಡಿ ಉಲ್ಲಂಘಿಸಿ ಹೋದ ಯೋಧನಿಗೆ 3 ತಿಂಗಳು ಜೈಲು ಶಿಕ್ಷೆ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಕಳೆದ ವರ್ಷ ಸರ್ಜಿಕಲ್ ಸ್ಟ್ರೈಕ್ ಸಮಯದಲ್ಲಿ ಆಕಸ್ಮಿಕವಾಗಿ ಗಡಿ ಉಲ್ಲಂಘಿಸಿ ಕಳೆದ ಜನವರಿಯಲ್ಲಿ ಭಾರತಕ್ಕೆ ಹಸ್ತಾಂತರಿಸಲಾಗಿದ್ದ ಭಾರತೀಯ ಯೋಧ ಆರೋಪಿ ಎಂದು ಸಾಬೀತುಪಡಿಸಿರುವ ಸೇನಾ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ಚಂದು ಬಾಬುಲಾಲ್ ಚವನ್ ಎಂಬ ಯೋಧನಿಗೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿರುವ ಸೇನಾ ನ್ಯಾಯಾಲಯ, ಶಿಕ್ಷೆಯ ಪ್ರಮಾಣವನ್ನು ಅಧಿಕಾರಿಗಳು ಇನ್ನೂ ಅನುಮೋದಿಸಿಲ್ಲ.
ತಮ್ಮ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸುವ ಅವಕಾಶ ಚವನ್ ಅವರಿಗಿದೆ. 
37 ರಾಷ್ಟ್ರೀಯ ರೈಫಲ್ಸ್  ವಿಭಾಗದಲ್ಲಿ ಕರ್ತವ್ಯ ನಿರತರಾಗಿದ್ದ ಚವನ್ ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಸರ್ಜಿಕಲ್ ಸ್ಟ್ರೈಕ್ ಸಂದರ್ಭದಲ್ಲಿ ಕಾಶ್ಮೀರದಲ್ಲಿ ಗಡಿ ಉಲ್ಲಂಘಿಸಿ ಪಾಕ್ ಒಳಗೆ ಕಾಲಿಟ್ಟಿದ್ದರು. ನಂತರ ಜನವರಿಯಲ್ಲಿ ಪಾಕಿಸ್ತಾನ ಚವನ್ ರನ್ನು ಭಾರತಕ್ಕೆ ಹಸ್ತಾಂತರಿಸಿತ್ತು. 
ಮಹಾರಾಷ್ಟ್ರದ ಧುಲೆ ಜಿಲ್ಲೆಯ ಬೊರ್ವಿಹಿರ್ ಗ್ರಾಮಕ್ಕೆ ಸೇರಿದ ಚವನ್ ಬಂಧಿತರಾದ ಸುದ್ದಿ ಕೇಳಿ ಅವರ ಅಜ್ಜಿ ಆಘಾತದಿಂದ ತೀರಿಹೋಗಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.