ದೇಶ

ದೇಶದ ಆರ್ಥಿಕ ವ್ಯವಸ್ಥೆ ಪ್ರಧಾನಿ ಮೋದಿ ಕೈಯ್ಯಲ್ಲಿ ಸುರಕ್ಷಿತವಾಗಿದೆ: ಬಿಜೆಪಿ

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಬಿಜೆಪಿ ನಾಯಕರು ತಿರುಗೇಟು ...

ದೇಶದ ಆರ್ಥಿಕ ವ್ಯವಸ್ಥೆ ಪ್ರಧಾನಿ ಮೋದಿ ಕೈಯ್ಯಲ್ಲಿ ಸುರಕ್ಷಿತವಾಗಿದೆ: ಬಿಜೆಪಿ
ನರೇಂದ್ರ ಮೋದಿ
Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ.
ಮೋದಿ ಸರ್ಕಾರ ನಿರುದ್ಯೋಗ ಸಮಸ್ಯೆ ಹೆಚ್ಚಿಸಲು ಕಾರಣವಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮುಖಂಡ ಜಿ.ವಿ.ಎಲ್ ನರಸಿಂಹ ರಾವ್ ಕಾಂಗ್ರೆಸ್ ಪಕ್ಷ ವೆಂಟಿಲೇಟರ್ ಬೆಂಬಲದೊಂದಿಗೆ ಉಸಿರಾಡುತ್ತಿದೆ ಎಂದು ಟೀಕಿಸಿದ್ದಾರೆ.
ವೆಂಟಿಲೇಟರ್ ಮೂಲಕ ಉಸಿರಾಡುತ್ತಿರುವ ಕಾಂಗ್ರೆಸ್ ದೇಶದ ಆರ್ಥಿಕ ವ್ಯವಸ್ಥೆ ಬಗ್ಗೆ ಮಾತನಾಡುತ್ತಿರುವುದು ಹಾಸ್ಯಾಸ್ಪದ, ಭಾರತೀಯ ಆರ್ಥಿಕ ವ್ಯವಸ್ಥೆ ಪ್ರಧಾನಿ ನರೇಂದ್ರ ಮೋದಿ ಅವರ ಕೈಯ್ಯಲ್ಲಿ ಸುರಕ್ಷಿತವಾಗಿದೆ. ಪಾರದರ್ಶಕ ಆರ್ಥಿಕ ವ್ಯವಸ್ಥೆಯಿಂದಾಗಿ ವಿವಿಧ ಕಾರ್ಯಕ್ರಮಗಳ ಅನುಷ್ಠಾನವಾಗುತ್ತಿದೆ ಎಂದು ಹೇಳಿದ್ದಾರೆ.
ಇನ್ನೂ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಮತ್ತೊಬ್ಬ ಬಿಜೆಪಿ ನಾಯಕ ಸಿ.ಕೆ ಬೋಸ್, ಕಾಂಗ್ರೆಸ್ ನಾಯಕ ರಾಹುಲ್ ಈಗ ಬೆಳೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.